zika virus – Peepal Media

ಹೈ ಅಲರ್ಟ್:‌ ಕರ್ನಾಟಕದಲ್ಲಿ ಝಿಕಾ ವೈರಸ್‌ ಪತ್ತೆ
ಚಿಕ್ಕಬಳ್ಳಾಪುರ,ನವೆಂಬರ್.‌03: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಂಗ್ರಹಿಸಲಾಗಿರುವ ಸೊಳ್ಳೆಯ ಮಾದರಿಯಲ್ಲಿ ಝಿಕಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ಹೈ ಅಲರ್ಟ್ ಆಗಿದೆ. ಸೆಪ್ಟೆಂಬರ್‌ 25ರಂದು ಸಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಿಂದ ಈ ಸ್ಯಾಂಪಲ್‌ ಸಂಗ್ರಹಿಸಲಾಗಿತ್ತು. ಹೀಗಾಗಿ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ನಡುವೆ ಪ್ರಯಾಣ ಮಾಡುವವರಿಗೆ ಮುನ್ನೆಚ್ಚರಿಕೆ ವಹಿಸಿಕೊಳ್ಳಲು ಸೂಚಿಸಲಾಗಿದೆ.

ಚಿಕ್ಕಬಳ್ಳಾಪುರದಿಂದ ಬೆಂಗಳೂರು ಮತ್ತು ಇತರೆಡೆಗೆ ದಿನನಿತ್ಯ ಸಾವಿರಾರು ಜನರು ಪ್ರಯಾಣಿಸುತ್ತಿದ್ದು, ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ.

ಕಳೆದ ಎರಡು ತಿಂಗಳಿಂದ ರಾಜ್ಯದ 68 ಪ್ರದೇಶಗಳಲ್ಲಿ ಜ್ವರ ಪೀಡಿತ, ಗರ್ಭಿಣಿಯರನ್ನು ಝಿಕಾ ವೈರಸ್‌ ಸೋಂಕಿನ ತಪಾಸನೆಗೆ ಒಳಪಡಿಸಲಾಗಿದೆ.

ರಾಜ್ಯ ಆರೋಗ್ಯ ಇಲಾಖೆ ಪ್ರಕಾರ, ದಿಬ್ಬೂರಹಳ್ಳಿಯ 30 ವರ್ಷದ ಪುರುಷ, ತಲಕಾಯಲಬೆಟ್ಟದ 38 ವರ್ಷದ ಮಹಿಳೆ ಮತ್ತು ಬಾಚನಹಳ್ಳಿಯ 50 ವರ್ಷದ ಮಹಿಳೆ ಜ್ವರದಿಂದ ಬಳಲುತ್ತಿದ್ದು, ಸೋಂಕಿನ ದೃಢೀಕರಣಕ್ಕಾಗಿ ಅವರ ರಕ್ತದ ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ (ಎನ್‌ಐವಿ) ಕಳುಹಿಸಲಾಗಿದೆ ಎಂದು ದಿ ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ಝಿಕಾ ವೈರಸ್ ಈಡಿಸ್ ಸೊಳ್ಳೆಯಿಂದ ಹರಡುತ್ತದೆ. ಈ ಸೋಂಕು ದೇಹದಲ್ಲಿ ರ್ಯಾಷಸ್, ಜ್ವರ, ಕೆಂಪು ಕಣ್ಣು, ಸ್ನಾಯು ಮತ್ತು ಕೀಲು ನೋವು, ಅಸ್ವಸ್ಥತೆ ಮತ್ತು ತಲೆನೋವು ಇತ್ಯಾದಿ ರೋಗ ಲಕ್ಷಣಗಳನ್ನು ತೋರಿಸುತ್ತದೆ. ಸದ್ಯ ಈ ಸೋಂಕಿಗೆ ಯಾವುದೇ ಲಸಿಕೆ ಅಥವಾ ನಿರ್ದಿಷ್ಟ ಚಿಕಿತ್ಸೆ ಲಭ್ಯವಿಲ್ಲ.

ರಾಯಚೂರಿನಲ್ಲಿ ಝೀಕಾ ವೈರಸ್‌: ಮೊದಲ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕರ್ನಾಟಕದಲ್ಲಿ ಕಟ್ಟೆಚ್ಚರ
ಬೆಂಗಳೂರು: ಉತ್ತರ ಕರ್ನಾಟಕದ ರಾಯಚೂರು ಜಿಲ್ಲೆಯ ಐದು ವರ್ಷದ ಬಾಲಕಿಗೆ ಝೀಕಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಪ್ರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೆಚ್ಚಿನ ಕಟ್ಟೆಚ್ಚರ ವಹಿಸಿದೆ.

ವೈರಸ್‌ ದೃಢಪಟ್ಟಿರುವುದನ್ನು ಮನಗಂಡಿರುವ ರಾಜ್ಯ ಸರ್ಕಾರ, ರೋಗವನ್ನು ನಿಯಂತ್ರಿಸಲು ಮಂಗಳವಾರದಿಂದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಪ್ರಾರಂಭಿಸುವಂತೆ ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಿದೆ.

ತಜ್ಞರ ಪ್ರಕಾರ, ಮಾಂಡೌಸ್ ಚಂಡಮಾರುತದಿಂದಾಗಿ ರಾಜ್ಯದಲ್ಲಿ ಶೀತ, ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯು ಪರಿಸ್ಥಿತಿಯು ಮತ್ತಷ್ಟು ಜಟಿಲಗೊಂಡಿದ್ದು, ಈ ಪರಿಸ್ಥಿತಿಗಳಲ್ಲಿ ವೈರಸ್ ವೇಗವಾಗಿ ಹರಡುತ್ತದೆ ಎಂದು ಎಚ್ಚರಿಸಿದ್ದಾರೆ.

ಅಧಿಕಾರಿಗಳು ಬಾಲಕಿಯ ಪ್ರಯಾಣದ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ ಮತ್ತು ಬಾಲಕಿಯ ಮನೆಯ ನೆರೆಹೊರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈಗಾಗಲೇ ಮುನ್ನೆಚ್ಚರಿಕೆಗಳನ್ನು ನೀಡಲು ಪ್ರಾರಂಭಿಸಲಾಗಿದ್ದು, ಪೋಷಕರು ಮತ್ತು ಕುಟುಂಬ ಸದಸ್ಯರ ರಕ್ತ ಮತ್ತು ಮೂತ್ರದ ಮಾದರಿಗಳನ್ನು ಸಂಗ್ರಹಿಸಲಾಗಿದೆ ಮತ್ತು ಇಲ್ಲಿಯವರೆಗೆ ಐದು ಜನರ ಪರೀಕ್ಷೆ ನೆಗೆಟಿವ್ ಬಂದಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಸಿದ್ಧವಾಗಿದೆ. ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ನಡೆಸಿದ ಪರೀಕ್ಷೆಗಳಲ್ಲಿ ರೋಗವು ದೃಢಪಟ್ಟಿರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ.

ನವೆಂಬರ್ 13 ರಂದು ಬಾಲಕಿಗೆ ಜ್ವರದಿಂದ ಸೋಂಕು ತಗುಲಿತ್ತು. ಪೋಷಕರು ಆಕೆಯನ್ನು ಸಿಂಧನೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಅವಳು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾಳೆ ಎಂದು ತಿಳಿದುಬಂದಿದೆ. ನಂತರ, ಬಾಲಕಿಯನ್ನು ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (ವಿಮ್ಸ್) ಸ್ಥಳಾಂತರಿಸಲಾಯಿತು ಮತ್ತು ನವೆಂಬರ್ 15 ರಿಂದ 18 ರವರೆಗೆ ಚಿಕಿತ್ಸೆ ನೀಡಲಾಯಿತು ಎಂದು ತಿಳಿಸಿದ್ದಾರೆ.

ದೇಶದ ಮೊದಲ ಝೀಕಾ ವೈರಸ್ 2020 ರಲ್ಲಿ ಕೇರಳದಲ್ಲಿ ಕಂಡುಬಂದಿದೆ. ಜ್ವರ, ದೇಹದ ನೋವು ಮತ್ತು ಕೀಲುಗಳಲ್ಲಿ ನೋವು, ದದ್ದು ಮತ್ತು ಕಂಜಂಕ್ಟಿವೈಟಿಸ್ ನ ತೀವ್ರ ರೋಗಲಕ್ಷಣಗಳು ಜಿಕಾ ವೈರಸ್ ಪೀಡಿತ ವ್ಯಕ್ತಿಗಳಲ್ಲಿ ಕಂಡುಬರುತ್ತವೆ. ಝೀಕಾ ವೈರಸ್ ಪ್ರಾಥಮಿಕವಾಗಿ ಸೋಂಕಿತ ಈಡಿಸ್ ಜಾತಿಯ ಸೊಳ್ಳೆಯ ಕಡಿತದ ಮೂಲಕ ಜನರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲಿನಲ್ಲಿ ಕಚ್ಚುತ್ತವೆ. ಈ ರೋಗವು ಅಸುರಕ್ಷಿತ ಸಂಭೋಗ ಮತ್ತು ರಕ್ತ ಪ್ರಸರಣದ ಮೂಲಕವೂ ಹರಡುತ್ತದೆ ಎಂದು ತಿಳಿಸಿದ್ದಾರೆ.