Home ದೇಶ ಫೆಂಗಲ್ ಚಂಡಮಾರುತ ಎಫೆಕ್ಟ್ | ಚೆನ್ನೈ ವಿಮಾನ ನಿಲ್ದಾಣ ಬಂದ್;ಹಾರಾಟ ರದ್ದುಗೊಳಿಸಿದ ವಿಮಾನ ಸಂಸ್ಥೆಗಳು, ಪ್ರಯಾಣಿಕರ...

ಫೆಂಗಲ್ ಚಂಡಮಾರುತ ಎಫೆಕ್ಟ್ | ಚೆನ್ನೈ ವಿಮಾನ ನಿಲ್ದಾಣ ಬಂದ್;ಹಾರಾಟ ರದ್ದುಗೊಳಿಸಿದ ವಿಮಾನ ಸಂಸ್ಥೆಗಳು, ಪ್ರಯಾಣಿಕರ ಪರದಾಟ

0

ನೈಋತ್ಯ ಬಂಗಾಳಕೊಲ್ಲಿಯಲ್ಲಿ ಕೇಂದ್ರೀಕೃತವಾಗಿರುವ ಚಂಡಮಾರುತ ಶುಕ್ರವಾರ ತಮಿಳುನಾಡಿನ ಮುಗಿಯದ ಮಳೆಯಾಗಿ ಅಪ್ಪಳಿಸುತ್ತಿದೆ. ಇದು ಶನಿವಾರ ಸಂಜೆ ಪುದುಚೇರಿ ಸಮೀಪದ ಕಾರೈಕಲ್ – ಮಹಾಬಲಿಪುರಂ ನಡುವೆ ಕರಾವಳಿಯನ್ನು ದಾಟುವ ಸಾಧ್ಯತೆ ಇದೆ ಎಂದು ಚೆನ್ನೈ ಪ್ರಾದೇಶಿಕ ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.

ಈ ಚಂಡಮಾರುತದ ಪ್ರಭಾವದಿಂದಾಗಿ ತಮಿಳುನಾಡಿನಾದ್ಯಂತ ಭಾರೀ ಮಳೆಯಾಗುತ್ತಿದೆ.

ಫೆಂಗಲ್ ಚಂಡಮಾರುತದ ಪ್ರಭಾವದಿಂದಾಗಿ ರಾಜಧಾನಿ ಚೆನ್ನೈನಲ್ಲಿ ಧಾರಾಕಾರ ಮಳೆಯಾಗಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಪ್ರಮುಖ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ. ಬಿರುಗಾಳಿ ಸಹಿತ ಭಾರೀ ಮಳೆಯಿಂದಾಗಿ ವಿಮಾನ ಸೇವೆಗಳು ಅಸ್ತವ್ಯಸ್ತಗೊಂಡಿವೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ಶನಿವಾರ ಸಂಜೆ 7 ಗಂಟೆಯವರೆಗೆ ಚೆನ್ನೈ ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗುವುದು ಎಂದು ಘೋಷಿಸಲಾಗಿದೆ. ಇಂಡಿಗೋ ಸೇರಿದಂತೆ ಹಲವು ವಿಮಾನಯಾನ ಸಂಸ್ಥೆಗಳು ತಮ್ಮ ಸೇವೆಗಳನ್ನು ರದ್ದುಗೊಳಿಸುವುದಾಗಿ ಈಗಾಗಲೇ ಘೋಷಿಸಿವೆ. ಇತ್ತೀಚೆಗಷ್ಟೇ ವಿಮಾನ ನಿಲ್ದಾಣವನ್ನು ಮುಚ್ಚಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

You cannot copy content of this page

Exit mobile version