ಚೆನ್ನೈ: ತಮಿಳುನಾಡು ವಿಧಾನಸಭೆಯು ಶನಿವಾರ ಕ್ರಿಮಿನಲ್ ಕಾನೂನುಗಳು (ತಮಿಳುನಾಡು ತಿದ್ದುಪಡಿ) ಮಸೂದೆ, 2025 ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ನಿಷೇಧ (ತಿದ್ದುಪಡಿ) ಮಸೂದೆ, 2025 ಅನ್ನು ಅಂಗೀಕರಿಸಿತು. ಈ ಎರಡು ಮಸೂದೆಗಳನ್ನು ರಾಜ್ಯದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದರು.
ಈ ಎರಡೂ ಮಸೂದೆಗಳನ್ನು ವಿಧಾನಸಭೆ ಅಂಗೀಕರಿಸಿತು.
ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳಿಗೆ ಶಿಕ್ಷೆಯನ್ನು ಹೆಚ್ಚಿಸುವುದು ಮತ್ತು ಡಿಜಿಟಲ್ ಮತ್ತು ಎಲೆಕ್ಟ್ರಾನಿಕ್ ವೇದಿಕೆಗಳಲ್ಲಿ ಲೈಂಗಿಕ ಕಿರುಕುಳದಲ್ಲಿ ಭಾಗಿಯಾಗಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದು ಈ ಮಸೂದೆಯ ಪ್ರಮುಖ ಉದ್ದೇಶವಾಗಿದೆ.
ಆ ರಾಜ್ಯದಲ್ಲಿ ಅತ್ಯಾಚಾರಕ್ಕೆ ಗರಿಷ್ಠ ಶಿಕ್ಷೆ 10 ವರ್ಷ ಜೈಲು ಶಿಕ್ಷೆ ನೀಡಲಾಗುತ್ತಿತ್ತು. ಈಗ ತಿದ್ದುಪಡಿ ಮಾಡಲಾದ ಕ್ರಿಮಿನಲ್ ಕೋಡ್, ಅತ್ಯಾಚಾರಕ್ಕೆ ಕನಿಷ್ಠ 14 ವರ್ಷಗಳ ಜೈಲು ಶಿಕ್ಷೆಯನ್ನು ಪ್ರಸ್ತಾಪಿಸುತ್ತದೆ. ಅದೇ ಅತ್ಯಾಚಾರ ಎಸಗಿದ ವ್ಯಕ್ತಿ ಪೊಲೀಸ್ ಪಡೆಯ ಸದಸ್ಯರಾಗಿದ್ದರೆ, ಆ ವ್ಯಕ್ತಿಗೆ ಕನಿಷ್ಠ 20 ವರ್ಷಗಳ ಜೈಲು ಶಿಕ್ಷೆ ವಿಧಿಸಬೇಕು. ಅತ್ಯಾಚಾರಕ್ಕೆ ಒಳಗಾದವಳು 12 ವರ್ಷದೊಳಗಿನ ಹುಡುಗಿಯಾಗಿದ್ದರೆ, ಅಪರಾಧಿಗೆ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ ವಿಧಿಸಲು ಕ್ರಿಮಿನಲ್ ಕಾನೂನು ಮಸೂದೆ ಪ್ರಸ್ತಾಪಿಸುತ್ತದೆ.