Thursday, June 20, 2024

ಸತ್ಯ | ನ್ಯಾಯ |ಧರ್ಮ

ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್‌ ಮಿಸ್ಟ್ರಿ ದುರಂತ ಸಾವು

ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್‌ ಮಿಸ್ಟ್ರಿ ಅವರು ರಸ್ತೆ ಅಪಘಾತದಿಂದ  ಸಾವನ್ನಪ್ಪಿದ್ದಾರೆ. ಅಹಮದಾಬಾದಿನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಫಾಲ್ಘರ್‌ನ ಬಳಿ ಅವರ ಕಾರು ಡಿವೈಡರ್‌ ಗೆ ಡಿಕ್ಕಿ ಹೊಡೆದು ಈ ದುರಂತ ಘಟನೆ ಸಂಭವಿಸಿದೆ. ಈ ವೇಳೆ ಕಾರಿನಲ್ಲಿದ್ದ ನಾಲ್ವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಫಾಲ್ಘಾರ್‌ನ ಪೋಲೀಸರು ಮಾದ್ಯಮಗಳಿಗೆ ತಿಳಿಸಿದ್ದಾರೆ.

ಟಾಟಾ ಸನ್ಸ್‌ನ ದುರಂತ ಸಾವಿಗೆ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ,ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಸೇರಿದಂತೆ  ಹಲವಾರು ಗಣ್ಯರು, ಅವರ ಕುಟುಂಬಕ್ಕೆ ಮತ್ತು ಸ್ನೇಹಿತರಿಗೆ ಸಂತಾಪ  ವ್ಯಕ್ತಪಡಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು