Thursday, June 20, 2024

ಸತ್ಯ | ನ್ಯಾಯ |ಧರ್ಮ

ಸಹಾಯಕ ಶಿಕ್ಷಕರ ನೇಮಕಾತಿ ಹಗರಣ:ಉಪಕುಲಪತಿ ಸುಬಿರೇಸ್ ಭಟ್ಟಾಚಾರ್ಯ ಬಂಧನ

ನವದೆಹಲಿ: 2016ರಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆದ ಸಹಾಯಕ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಇಂದು ಉತ್ತರ ಬಂಗಾಳ ವಿಶ್ವವಿದ್ಯಾಲಯದ ಉಪಕುಲಪತಿ ಸುಬಿರೇಸ್ ಭಟ್ಟಾಚಾರ್ಯ ಅವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಹಿತಿ ಪ್ರಕಾರ, ಪಶ್ಚಿಮ ಬಂಗಾಳದ ಕೇಂದ್ರೀಯ ಶಾಲಾ ಸೇವಾ ಆಯೋಗದ ಮಾಜಿ ಅಧ್ಯಕ್ಷ ಭಟ್ಟಾಚಾರ್ಯ ಅವರನ್ನು ಕೋಲ್ಕತ್ತಾದ ಸಿಬಿಐ ಕಚೇರಿಯಲ್ಲಿ ವಿಚಾರಣೆಗೆ ಕರೆಯಲಾಗಿತ್ತು. ಈ ವೇಳೆ ಹಗರಣದಲ್ಲಿ ಅವರು ಸಹಕಾರಿಯಾಗದಿರುವುದನ್ನು ಕಂಡು ಸಿಬಿಐ ಅವರನ್ನು ವಶಕ್ಕೆ ತೆಗೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಯೋಗವು 2016 ರಲ್ಲಿ ನಡೆಸಿದ ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆಯಲ್ಲಿ 9 ಮತ್ತು 10 ನೇ ತರಗತಿಯ ಸಹಾಯಕ ಶಿಕ್ಷಕರ ನೇಮಕಾತಿಯಲ್ಲಿ ಆಗಿನ ಆಯೋಗದ ಸಲಹೆಗಾರ ಎಸ್‌ಪಿ ಸಿನ್ಹಾ ಮತ್ತು ಇತರರು, ಆಯೋಗದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಮತ್ತು ಸಹಾಯಕ ಶಿಕ್ಷಕರ ನೇಮಕಾತಿಯಿಂದ ಅರ್ಹ ಮತ್ತು ಸಮರ್ಥ ಅಭ್ಯರ್ಥಿಗಳನ್ನು ವಂಚಿಸಿದ್ದಾರೆ ಎಂದು ಸಿಬಿಐ ಈ ವರ್ಷ ಏಪ್ರಿಲ್ 7 ರಂದು ದಾಖಲಿಸಿದ ಎಫ್‌ಐಆರ್‌ನಲ್ಲಿ ಆರೋಪಿಸಿದೆ.

Related Articles

ಇತ್ತೀಚಿನ ಸುದ್ದಿಗಳು