Team India Champions : ದುಬೈನಲ್ಲಿ ನಡೆದ 2025ರ ಏಷ್ಯಾಕಪ್ ಫೈನಲ್‌ನಲ್ಲಿ ಭಾರತ, ಪಾಕಿಸ್ತಾನವನ್ನು ಸೋಲಿಸಿ ಚಾಂಪಿಯನ್ ಪಟ್ಟಕ್ಕೇರಿದೆ. 41 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉಭಯ ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದವು. ಟೀಂ ಇಂಡಿಯಾ ಈ ಟೂರ್ನಿಯಲ್ಲಿ ಪಾಕಿಸ್ತಾನದ ಮೇಲೆ ಸಂಪೂರ್ಣ ಮೇಲುಗೈ ಸಾಧಿಸಿತು. ಈ ಭರ್ಜರಿ ಗೆಲುವಿನೊಂದಿಗೆ ಭಾರತ ಒಂಬತ್ತನೇ ಬಾರಿಗೆ ಏಷ್ಯಾಕಪ್ ಟ್ರೋಫಿಯನ್ನು ಎತ್ತಿಹಿಡಿದು ದಾಖಲೆ ನಿರ್ಮಿಸಿದೆ.