Thursday, June 20, 2024

ಸತ್ಯ | ನ್ಯಾಯ |ಧರ್ಮ

ತಾಂತ್ರಿಕ ದೋಷ: ಸೋನಿಯಾ ಮತ್ತು ರಾಹುಲ್ ಗಾಂಧಿ ವಿಮಾನ ಭೋಪಾಲದಲ್ಲಿ ತುರ್ತು ಭೂಸ್ಪರ್ಶ

ಭೋಪಾಲ್: ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನವನ್ನು ಭೋಪಾಲ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಈ ವಿಮಾನದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಬ್ಬರೂ ಇದ್ದರು. ತಾಂತ್ರಿಕ ದೋಷದಿಂದ ವಿಮಾನ ಭೋಪಾಲ್‌ನಲ್ಲಿ ಇಳಿಯಬೇಕಾಯಿತು.

ಇನ್ನು ಇಬ್ಬರೂ ನಾಯಕರು ರಾತ್ರಿ 9.30ಕ್ಕೆ ನಿತ್ಯ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ.

ಭೋಪಾಲ್‌ನ ರಾಜಾ ಭೋಜ್ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. ಈ ವಿಮಾನದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇದ್ದರು. ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ವಿಮಾನವನ್ನು ಭೋಪಾಲ್‌ನಲ್ಲಿ ಇಳಿಸಬೇಕಾಯಿತು. ಸೋನಿಯಾ ಮತ್ತು ರಾಹುಲ್ ಬೆಂಗಳೂರಿನಿಂದ ಚಾರ್ಟರ್ಡ್ ವಿಮಾನದಲ್ಲಿ ದೆಹಲಿಗೆ ತೆರಳುತ್ತಿದ್ದರು. ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಕಾಂಗ್ರೆಸ್ ಹಿರಿಯ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಭೋಪಾಲ್ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು. ಇದೀಗ ಇಬ್ಬರೂ ನಾಯಕರು ಇಂಡಿಗೋ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ.

ಇಂದು ಬೆಂಗಳೂರಿನಲ್ಲಿ ನಡೆದ 26 ವಿರೋಧ ಪಕ್ಷಗಳ ಸಭೆಯಲ್ಲಿ ಪಾಲ್ಗೊಂಡು ರಾಹುಲ್ ಮತ್ತು ಸೋನಿಯಾ ಗಾಂಧಿ ದೆಹಲಿಗೆ ವಾಪಸಾಗುತ್ತಿದ್ದರು.

Related Articles

ಇತ್ತೀಚಿನ ಸುದ್ದಿಗಳು