ತೀಸ್ತಾ ಸೆಟಲ್ವಾದ್ ಅವರಿಗೆ ಸುಪ್ರೀಂ ಜಾಮೀನು

ನವದೆಹಲಿ: ಗುಜರಾತ್‌ ಪೊಲೀಸರು ಹೂಡಿರುವ ಮೊಕದ್ದಮೆ ಹಿನ್ನೆಲೆಯಲ್ಲಿ ಬಂಧಿತ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾದ್ ಅವರ ಜಾಮೀನು ಅರ್ಜಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್‌ ಇಂದು ಜಾಮೀನು ಮಂಜೂರು ಮಾಡಿದೆ.

2002ರ ಗುಜರಾತ್‌ ಗಲಭೆಗೆ ಸಂಬಂಧಿಸಿದಂತೆ ತಿರುಚಿದ ದಾಖಲೆಗಳೊಂದಿಗೆ ಪ್ರಕರಣ ದಾಖಲಿಸಿದ ಆರೋಪದ ಮೇರೆಗೆ ಜೂ.26ರಂದು ತೀಸ್ತಾ ಸೆಟಲ್ವಾದ್‌ ಅವರನ್ನು ಬಂಧಿಸಲಾಗಿತ್ತು.

ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌, ನ್ಯಾಯಾಮೂರ್ತಿ ಎಸ್ .ರವೀಂದ್ರ ಭಟ್‌ ಮತ್ತು ನ್ಯಾಯಮೂರ್ತಿ ಸುಧಾಂಶು ಧೂಲಿಯ ಅವರನ್ನೊಳಗೊಂಡ ತ್ರಿಸದಸ್ಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ಜಾಮೀನು ಮಂಜೂರು ಮಾಡಿದೆ

Related Articles

ಇತ್ತೀಚಿನ ಸುದ್ದಿಗಳು