ತೆಲಂಗಾಣದ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 40 ಕ್ಕೆ ಏರಿಕೆಯಾಗಿದೆ. ಸ್ಪೋಟ ಸಂಭವಿಸಿದ ದಿನದಲ್ಲಿ ಎರಡಂಕಿ ದಾಟಿರಲಿಲ್ಲ. ಆದರೆ 60ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದರು. ಆದರೆ ಈಗ ಸಾವಿನ ಸಂಖ್ಯೆ 40 ಕ್ಕೆ ಏರಿಕೆಯಾಗಿದೆ.
ಮೃತರ ಕುಟುಖ್ಬಕ್ಕೆ ಕಂಪನಿಯಿಂದ 1 ಕೋಟಿ ಪರಿಹಾರ ನೀಡಲಾಗಿದೆ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ತಿಳಿಸಿದ್ದರು. ಇನ್ನು ಗಂಭೀರವಾಗಿ ಗಾಯಗೊಂಡವರಿಗೆ ತಲಾ 10 ಲಕ್ಷ ಪರಿಹಾರ ಹಾಗೂ ಸಣ್ಣಪುಟ್ಟ ಗಾಯಾಳುಗಳಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ ಎಂದಿದ್ದರು.
ಇನ್ನು ಕಾರ್ಖಾನೆಯನ್ನು 90 ದಿನಗಳವರೆಗೆ ಮುಚ್ಚಲಾಗಿದೆ ಎಂದು ತಿಳಿದುಬಂದಿದೆ. ಈಗಾಗಲೇ ಸಿಗಾಚಿ ಕಂಪನಿಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.