Wednesday, June 11, 2025

ಸತ್ಯ | ನ್ಯಾಯ |ಧರ್ಮ

ಅಕ್ರಮ ಗಣಿಗಾರಿಕೆ ಪ್ರಕರಣ : ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು ಮಾಡಿದ ತೆಲಂಗಾಣ ಹೈಕೋರ್ಟ್

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಗಾಲಿ ಜನಾರ್ದನ ರೆಡ್ಡಿಗೆ ಕೊನೆಗೂ ತೆಲಂಗಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸಿ, ತೆಲಂಗಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಈ ನಡುವೆ ಹಲವು ಷರತ್ತು ವಿಧಿಸಿರುವ ಕೋರ್ಟ್ ಭಾರತವನ್ನು ತೊರೆಯುವಂತಿಲ್ಲ ಎಂದು ಆದೇಶ ಹೊರಡಿಸಿದೆ. ಹೀಗಾಗಿ ಕೋರ್ಟ್ ಗೆ ಪಾಸ್ ಪೋರ್ಟ್ ವಶಕ್ಕೆ ನೀಡುವಂತೆ ಸೂಚಿಸಿದೆ. ಹಾಗೂ 10 ಲಕ್ಷ ರೂಗಳ 2 ಶ್ಯೂರಿಟಿ ನೀಡಬೇಕು ಎಂದು ಕೋರ್ಟ್ ಆದೇಶ ಹೊರಡಿಸಿದೆ.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಡಳಿತದ ಅವಧಿಯಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಪ್ರಕರಣ ಇದಾಗಿದ್ದು, ಆಂಧ್ರ ಮತ್ತು ಕರ್ನಾಟಕದ ಗಡಿ ಭಾಗದ ಜನಾರ್ದನ ರೆಡ್ಡಿ ಒಡೆತನದ ಓಬಳಾಪುರಂ ಪ್ರದೇಶದ ಅದಿರಿನ ಅಕ್ರಮ ಗಣಿಕಾರಿಕೆಗೆ ಸಂಬಂಧಿಸಿದಂತೆ ಜನಾರ್ಧನ ರೆಡ್ಡಿ ಅಪರಾಧಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದ್ದು, 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ಸಧ್ಯ ಈಗ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page