Friday, June 14, 2024

ಸತ್ಯ | ನ್ಯಾಯ |ಧರ್ಮ

ಕಿರುತೆರೆ ನಟ ಚಂದು ಆತ್ಮ*ತ್ಯೆ ; ನಟಿ ಪವಿತ್ರಾ ಜಯರಾಂ ದುರಂತ ಅಂತ್ಯವೇ ಕಾರಣವಾಯ್ತೆ?

ಕಳೆದ ಕೆಲವು ದಿನಗಳ ಹಿಂದೆ ಕನ್ನಡ ಮತ್ತು ತೆಲುಗು ಎರಡೂ ಭಾಷೆಗಳ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದ ನಟಿ ಪವಿತ್ರಾ ಜಯರಾಮ್, ಅವರ ಅಪಘಾತದ ಸಾವಿನಿಂದ ಮನನೊಂದು ಕಿರುತೆರೆ ನಟ ಚಂದು ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

‘ಕಾರ್ತಿಕ ದೀಪಂ’, ‘ರಾಧಮ್ಮ ಪೆಲ್ಲಿ’, ‘ತ್ರಿನಯನಿ’ ಮತ್ತು ಇತರ ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದ ಚಂದು ಅವರು ಮೇ 12 ರಂದು ಆಂಧ್ರಪ್ರದೇಶದ ಕರ್ನೂಲ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಟಿವಿ ನಟಿ ಪವಿತ್ರಾ ಜಯರಾಮ್ ನಿಧನರಾದ ನಂತರ ಖಿನ್ನತೆಗೆ ಒಳಗಾಗಿದ್ದರು ಎಂದು ವರದಿಯಾಗಿದೆ.

ಚಂದು ಕಳೆದ ಆರು ವರ್ಷಗಳಿಂದ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅವರೊಂದಿಗೆ ಪ್ರೀತಿ ಹೊಂದಿದ್ದರು. ಇಬ್ಬರೂ ಶೀಘ್ರದಲ್ಲೇ ಮದುವೆಯಾಗಲು ಬಯಸಿದ್ದರು ಎಂಬ ಮಾತುಗಳು ಕೇಳಿ ಬಂದಿತ್ತು.

ಆದರೆ, ಈ ಮಧ್ಯೆ ಪವಿತ್ರಾ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಆಕೆ ತನ್ನ ಸ್ನೇಹಿತರೊಂದಿಗೆ ಕಾರಿನಲ್ಲಿ ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಇದೇ ಅಪಘಾತದಲ್ಲಿ ಚಂದು ಕೂಡ ಗಂಭೀರ ಗಾಯಗಳೊಂದಿಗೆ ಪಾರಾಗಿದ್ದರು. ಈ ಮಧ್ಯೆ ಶುಕ್ರವಾರ ತಡರಾತ್ರಿ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು