Wednesday, October 8, 2025

ಸತ್ಯ | ನ್ಯಾಯ |ಧರ್ಮ

ಬಿಗ್‌ಬಾಸ್ ರಿಯಾಲಿಟಿ ಶೋಗೆ ತಾತ್ಕಾಲಿಕ ರಿಲೀಫ್ ಸಾಧ್ಯತೆ ; ಸಮಸ್ಯೆ ಬಗೆಹರಿಸಿಕೊಳ್ಳಲು ಜಿಲ್ಲಾಡಳಿತದಿಂದ 10 ದಿನಗಳ ಗಡುವು

ನಿಯಮ ಉಲ್ಲಂಘನೆ ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯದೆ ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋ ಆರಂಭಿಸಿದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾಡಳಿತ ಮತ್ತು ಪೊಲೀಸರ ಸ್ಟುಡಿಯೋಗೆ ಬೀಗ ಹಾಕಿದ್ದರು. ಇದೀಗ ಜಾಲಿವುಡ್ ಸ್ಟುಡಿಯೋ ಜಿಲ್ಲಾಡಳಿತಕ್ಕೆ ಮನವಿ ಕೋರಿದ ಹಿನ್ನೆಲೆಯಲ್ಲಿ ಕೇವಲ 10 ದಿನಗಳ ಅನುಮತಿ ಸಿಕ್ಕಿದೆ.

ವೆಲ್ಸ್ ಸ್ಟುಡಿಯೋಸ್ ರವರು 15 ದಿನಗಳ ಕಾಲ ಅವಕಾಶ ನೀಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಪಾಲನೆ ಆಗಿಲ್ಲ ಅದೆಲ್ಲವನ್ನು ಸರಿಪಡಿಸುತ್ತೇವೆ ಎಂದು ವೆಲ್ಸ್ ಸ್ಟುಡಿಯೋಸ್ ಡಿಸಿಗೆ ಪತ್ರ ಬರೆದು ಮನವಿ ಮಾಡಿದ್ದು ಹಾಗಾಗಿ ಜಿಲ್ಲಾಡಳಿತ 10 ದಿನಗಳ ಕಾಲ ಅವಕಾಶ ನೀಡಿದೆ ಎನ್ನಲಾಗುತ್ತಿದೆ.

ಈಗಾಗಲೇ ಬಿಡದಿ ಬೆಳೆಯುವ ಈಗಲ್ಟನ್ ರೆಸಾರ್ಟ್ ನಲ್ಲಿ ಇರುವ ಬಿಗ್ ಬಾಸ್ ಸ್ಪರ್ಧಿಗಳು ತಂಗಿದ್ದು, ಮಧ್ಯಾಹ್ನ 2:00 ಒಳಗೆ ರಿಲೀಫ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಸಧ್ಯ ಬಿಗ್ ಬಾಸ್ ದೈನಂದಿನ ಶೋ ಆಗಿರುವ ಹಿನ್ನೆಲೆಯಲ್ಲಿ ಪ್ರೊಡಕ್ಷನ್ಸ್ ಹೌಸ್ ಗೆ ಶೋ ಆರಂಭ ಅನಿವಾರ್ಯವಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page