ಮಂಗಳವಾರ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಒಪ್ಪಿಗೆ ನೀಡಲಾಗಿತ್ತು. ಆದರೆ ಮುಖ್ಯಮಂತ್ರಿಗಳ ಕಛೇರಿಯಿಂದ ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಧೇಯಕಕ್ಕೆ ಈಗ ತಾತ್ಕಾಲಿಕ ತಡೆ ನೀಡಲಾಗಿದೆ.
ಪತ್ರಿಕಾ ಪ್ರಕಟಣೆಯಲ್ಲಿ ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟ್ವಿಟರ್ (X) ನಲ್ಲಿ ತಿಳಿಸಿದ್ದಾರೆ.