ನವದೆಹಲಿ: ದೇಶದಲ್ಲಿ ತೆರಿಗೆ ಹೆಚ್ಚಾಗಿದ್ದರು ಕೇಂದ್ರ ಸರ್ಕಾರ ತಮ್ಮ ಬಳಿ ಹಣವಿಲ್ಲ ಎಂದು ಹೇಳುತ್ತಿದೆ. ಹಾಗದರೆ ತೆರಿಗೆ ಹಣ ಎಲ್ಲಿ? ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ಅಗ್ನಿಪಥ ಯೋಜನೆಯನ್ನು ಸಮರ್ಥಿಸಿಕೊಂಡ ಕೇಂದ್ರವು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ದೇಶದ ರಕ್ಷಣಾ ಸಿಬ್ಬಂದಿಗೆ ಪಿಂಚಣಿ ನೀಡಬೇಕಾಗಿಲ್ಲ ಎಂದು ಹೇಳುತ್ತಿದೆ ಎಂದರು. 2014 ಕ್ಕೆ ಹೋಲಿಸಿದರೆ ಪ್ರಸ್ತುತ ದಿನಮಾನಗಳಲ್ಲಿ ಹೆಚ್ಚು ತೆರಿಗೆ ಸಂಗ್ರಹಿಸಲಾಗುತ್ತಿದೆ. ಆದರೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡುತ್ತಿದ್ದ ಹಣವನ್ನು ಕಡಿಮೆ ಮಾಡಿದೆ, ಕಳೆದ 75 ವರ್ಷಗಳಲ್ಲಿ ಯಾವತ್ತೂ ಸರ್ಕಾರ ಮೂಲ ಆಹಾರ ಧಾನ್ಯಗಳ ಮೇಲೆ ತೆರಿಗೆ ವಿಧಿಸಿಲ್ಲ. ಆದರೆ ಇಂದು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ 1000 ಕೋಟಿ ಮೀರಿದೆ. ಸರ್ಕಾರಿ ಶಾಲೆಗಳು, ಆಸ್ಪತ್ರೆಗಳಲ್ಲಿ ಶುಲ್ಕ ವಿಧಿಸಬೇಕು. ಆದರೂ ಉಚಿತ ಪಡಿತರ ನಿಲ್ಲಿಸಲು ಹೇಳುತ್ತಿದ್ದಾರೆ, ಹಾಗದರೆ ದೇಶದಲ್ಲಿನ ತೆರಿಗೆ ಹಣ ಏನಾಯಿತು? ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ಸರ್ಕಾರದ ಹಣದಿಂದ ಅವರು ತಮ್ಮ ಬಿಲಿಯನೇರ್ ಸ್ನೇಹಿತರ ತೆರಿಗೆಯನ್ನು ಮನ್ನಮಾಡುತ್ತಿದ್ದಾರೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.