ಹಾವೇರಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಗಳಲ್ಲಿ ಒಂದೇ ವಾಹನದಲ್ಲಿದ್ದ 13 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ದುರ್ಮರಣಕ್ಕೀಡಾಗಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಸ್ತೆ ಅಪಘಾತ ನಡೆದಿದೆ.
ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 13 ಜನ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇಬ್ಬರು ಗಂಭೀರ ಸ್ಥಿತಿಯಲ್ಲಿ ಇದ್ದಾರೆ ಎಂದು ತಿಳಿದು ಬಂದಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ.
ಮೃತರು ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಮರಳಿ ಊರಿಗೆ ಹೋಗುವಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿದ್ದಾರೆ. ಬ್ಯಾಡಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಟಿಟಿ ವಾಹನದಲ್ಲಿದ್ದ ಎಲ್ಲರೂ ಶಿವಮೊಗ್ಗ ಜಿಲ್ಲೆಯವರು ಎಂಬ ಮಾಹಿತಿ ಸಿಕ್ಕಿದೆ.