ಬೆಂಗಳೂರು: ಹಾಸನ ಜಿಲ್ಲೆಯ ಕೆರೆ ತಾಲೂಕಿನ ಬಾಣಾವರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವಿಗೀಡಾಗಿದ್ದಾರೆ.
ಈ ಕುರಿತು ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಅವರು, ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಶಾಂತಿ ಮತ್ತು ಕುಟುಂಬ ವರ್ಗಕ್ಕೆ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಹಾಗು ರಾಜ್ಯ ಸರ್ಕಾರ ಮೃತ ದುರ್ದೈವಿಗಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸುತ್ತೇನೆ ಎಂದು ಹೇಳಿದರು.