Saturday, December 21, 2024

ಸತ್ಯ | ನ್ಯಾಯ |ಧರ್ಮ

ನೆಲಮಂಗಲ ಬಳಿ ಭೀಕರ ಅಪಘಾತ: 6 ಮಂದಿ ಸ್ಥಳದಲ್ಲೇ ದುರ್ಮ*ರಣ

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಾಫ್ಟ್‌ವೇರ್ ಕಂಪನಿ ಮುಖ್ಯಸ್ಥ ಸೇರಿ 6 ಮಂದಿ ಮೃತಪಟ್ಟಿದ್ದಾರೆ. ನೆಲಮಂಗಲ ತಾಲೂಕಿನ ತಾಳೆಕೆರೆ ಬಳಿ ನಡೆದ ಈ ಸರಣಿ ಅಪಘಾತದಿಂದ ಟ್ರಾಫಿಕ್ ಸಮಸ್ಯೆ ಕಂಡುಬಂದಿದ್ದು, ಸ್ಥಳೀಯರು ಮತ್ತು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

IAST ಸಾಫ್ಟ್‌ವೇರ್ ಸಲ್ಯೂಷನ್‌ ಮುಖ್ಯಸ್ಥ ಚಂದ್ರಮ್ ಯಾಗಪ್ಪಗೋಳ್( 48), ಗೌರಾಬಾಯಿ (42), ದೀಕ್ಷಾ (12), ಜಾನ್ (16), ವಿಜಯಲಕ್ಷ್ಮಿ (36), ಆರ್ಯ (6) ಎಂಬುವವರು ಈ ಕಾರಿನಲ್ಲಿ ತೆರಳುತ್ತಿದ್ದರು. ಕಾರಿನ ಮೇಲೆ ಬೃಹತ್ ಕಂಟೇನರ್ ಲಾರಿ ಬಿದ್ದ ಪರಿಣಾಮ ರಭಸಕ್ಕೆ ಕಾರು ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಕಾರಿನಲಿದ್ದ ಒಟ್ಟು 6 ಮಂದಿಯೂ ಸಾವಿಗೀಡಾಗಿದ್ದಾರೆ. ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಈ ಸರಣಿ ಅಪಘಾತ ಸಂಭವಿಸಿದೆ.

ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತ ಸಂಭವಿಸಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗಿದೆ. ಸ್ಥಳಕ್ಕೆ ನೆಲಮಂಗಲ ಪೊಲೀಸರು ಆಗಮಿಸಿದ್ದು, ಕಂಟೇನರ್ ಲಾರಿಯನ್ನು ತೆರವುಗೊಳಿಸುತ್ತಿದ್ದಾರೆ. ಕಂಟೇನರ್‌ ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page