ಭೀಕರ ರಸ್ತೆ ಅಪಘಾತ: 9 ಜನರ ಸಾವು

ಮುಂಬೈ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಜೆಜುರಿ-ಮೋರ್ಗನ್ ರಸ್ತೆಯಲ್ಲಿ ಕಾರು ಟೆಂಪೋಗೆ ಡಿಕ್ಕಿ ಹೊಡೆದಿದ್ದು, ಈ ಅಪಘಾತದಲ್ಲಿ 9 ಜನರು ಮೃತರಾಗಿದ್ದಾರೆ. ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳೀಯರು ತಕ್ಷಣ ಪ್ರತಿಕ್ರಿಯಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತಲುಪಿ ಗಾಯಾಳುಗಳನ್ನು ಜೆಜುರಿಯ ಶಾಂತೈ ಆಸ್ಪತ್ರೆಗೆ ಸ್ಥಳಾಂತರಿಸಿದರು. ಶವಗಳನ್ನು ಸಹ ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಜನರು ಟೆಂಪೋದಿಂದ ರೆಫ್ರಿಜರೇಟರ್ ಇಳಿಸುತ್ತಿದ್ದರು.

ಆ ಸಮಯದಲ್ಲಿ ವೇಗವಾಗಿ ಬಂದ ಕಾರು ಟೆಂಪೋಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಒಂಬತ್ತು ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಾಯಗೊಂಡವರಲ್ಲಿ ಒಬ್ಬ ಪುರುಷ, ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ.

ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಸೋಮನಾಥ್ ರಾಮಚಂದ್ರ, ರಾಮು ಸಂಜೀವನಿ ಯಾದವ್, ಅಕ್ಷಯ್ ಕುಮಾರ್ ಚವ್ಹಾಣ್, ಅಜಿತ್ ಅಶೋಕ್ ಜಾಧವ್, ಕಿರಣ್ ಭರತ್ ರಾವುತ್, ಅಶ್ವಿನಿ ಸಂತೋಷ್ ಮತ್ತು ಅಕ್ಷಯ್ ರಾವುತ್ ಎಂದು ಗುರುತಿಸಲಾಗಿದೆ. ಇನ್ನೊಂದು ಶವವನ್ನು ಇನ್ನೂ ಗುರುತಿಸಲಾಗಿಲ್ಲ ಎಂದು ಪೊಲೀಸ್‌ ಇಲಾಖೆ ಹೇಳಿದೆ.

Related Articles

ಇತ್ತೀಚಿನ ಸುದ್ದಿಗಳು