ಪಾಕಿಸ್ಥಾನದಲ್ಲಿ ಭೀಕರ ಭಯೋತ್ಪಾದಕ ದಾಳಿ; 38 ಮಂದಿ ದುರ್ಮರಣ

ಪಾಕಿಸ್ಥಾನದಲ್ಲಿ ಭೀಕರ ಭಯೋತ್ಪಾದಕ ದಾಳಿ ಸಂಭವಿಸಿದ್ದು, ಕನಿಷ್ಠ 38 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ಥಾನದ ವಾಯುವ್ಯ ಪ್ರದೇಶದ ಬುಡಕಟ್ಟು ಪ್ರದೇಶದಲ್ಲಿ ಪ್ರಯಾಣಿಕರ ವಾಹನಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.

ದಾಳಿಯಲ್ಲಿ ಕನಿಷ್ಠ 38 ಜನರು ಸಾವನ್ನಪ್ಪಿದ್ದಾರೆ ಮತ್ತು 29 ಜನ ಗಂಭೀರ ಗಾಯಗೊಂಡಿದ್ದಾರೆ ಎಂದು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಮುಖ್ಯ ಕಾರ್ಯದರ್ಶಿ ನದೀಮ್ ಅಸ್ಲಂ ಚೌಧರಿ ತಿಳಿಸಿದ್ದಾರೆ.

ಕುರ್ರಾಮ್ ಬುಡಕಟ್ಟು ಜಿಲ್ಲೆಯಲ್ಲಿ ಸಂಭವಿಸಿದ ದಾಳಿಯಲ್ಲಿ ಸಾವನ್ನಪ್ಪಿದವರಲ್ಲಿ ಮಹಿಳೆ ಮತ್ತು ಮಗು ಸೇರಿದ್ದಾರೆ ಎಂದು ಚೌಧರಿ ಹೇಳಿದರು, “ಇದು ದೊಡ್ಡ ದುರಂತ ಮತ್ತು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ” ಎಂದು ಹೇಳಿದರು. ಈವರೆಗೂ ಯಾವೊಂದು ಗುಂಪೂ ಸಹ ದಾಳಿಯ ಹೊಣೆ ಹೊತ್ತಿಲ್ಲ ಎಂದು ತಿಳಿದು ಬಂದಿದೆ.

Related Articles

ಇತ್ತೀಚಿನ ಸುದ್ದಿಗಳು