ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಅಲ್ಲದೇ ದೇಶದ ವಿವಿಧ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಪ್ರವಾಸಿ ಸ್ಥಳಗಳು ಮತ್ತು ಇತರ ಪ್ರಮುಖ ಸ್ಥಳಗಳ ಮೇಲೆ ತೀವ್ರ ನಿಗಾ ಇಡಲು ದೆಹಲಿ ಪೊಲೀಸರಿಗೆ ಸೂಚನೆ ನೀಡಲಾಗಿದೆ.
ಹಾಗೆಯೇ ಪಹಲ್ಗಾಮ್ ನಲ್ಲಿ ಉಗ್ರರ ಅಟ್ಟಹಾಸದ ಬೆನ್ನಲ್ಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಮಹತ್ವದ ತುರ್ತು ಸಭೆಯನ್ನು ನಡೆಸಲಾಗುತ್ತಿದೆ. ಈ ಸಭೆಯಲ್ಲಿ ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು, ಜಮ್ಮು-ಕಾಶ್ಮೀರದ ಭದ್ರತಾ ಅಧಿಕಾರಿಗಳು ಸೇರಿದಂತೆ ವಿವಿಧ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ನಾಳೆ ಘಟನಾ ಸ್ಥಳಕ್ಕೂ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ ಎನ್ನಲಾಗುತ್ತಿದೆ.