ಪಾಕಿಸ್ತಾನದ ಕ್ವೆಟ್ಟಾದಿಂದ ಬಲೂಚಿಸ್ತಾನದ ಪೇಶಾವರಕ್ಕೆ ಪ್ರಯಾಣಿಸುತ್ತಿದ್ದ ಜಾಫರ್ ಎಕ್ಸ್ಪ್ರೆಸ್ ರೈಲನ್ನೇ ಭಯೋತ್ಪಾದಕರು ಅಪಹರಿಸಿದ್ದಾರೆ. ಜಾಫರ್ ಎಕ್ಸ್ ಪ್ರೆಸ್ ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರನ್ನೂ ಒತ್ತೆಯಾಳುಗಳನ್ನಾಗಿ ತೆಗೆದುಕೊಂಡಿರುವುದಾಗಿ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಹೇಳಿಕೊಂಡಿದೆ.
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಮಂಗಳವಾರ ಪ್ರತ್ಯೇಕತಾವಾದಿ ಭಯೋತ್ಪಾದಕರು ಪ್ಯಾಸೆಂಜರ್ ರೈಲಿನ ಮೇಲೆ ದಾಳಿ ನಡೆಸಿದ್ದು, ರೈಲು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ರೈಲಿನಲ್ಲಿ ನಾನೂರಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎಂದು ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಎಂಬ ಉಗ್ರಗಾಮಿ ಪ್ರತ್ಯೇಕತಾವಾದಿ ಗುಂಪು ಈ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಭದ್ರತಾ ಪಡೆಗಳು ಸೇರಿದಂತೆ ರೈಲಿನಿಂದ ಒತ್ತೆಯಾಳುಗಳನ್ನು ತೆಗೆದುಕೊಂಡಿದೆ ಎಂದು ಹೇಳಿದೆ.