Home ಬೆಂಗಳೂರು ತರಗತಿಯಲ್ಲಿ ಶಿಕ್ಷಕರಿಂದ ನಿಂದನೆ, 7ನೇ ತರಗತಿ – ವಿದ್ಯಾರ್ಥಿ ಆತ್ಮಹತ್ಯೆ ಯತ್ನ

ತರಗತಿಯಲ್ಲಿ ಶಿಕ್ಷಕರಿಂದ ನಿಂದನೆ, 7ನೇ ತರಗತಿ – ವಿದ್ಯಾರ್ಥಿ ಆತ್ಮಹತ್ಯೆ ಯತ್ನ

ಬೆಂಗಳೂರು : ಶಾಲೆಯಲ್ಲಿ ನಡೆದ ಸಣ್ಣ ಘಟನೆಯೊಂದಕ್ಕೆ ಸಂಬಂಧಿಸಿದಂತೆ ಶಿಕ್ಷಕರೊಬ್ಬರು ಶಿಕ್ಷೆ ವಿಧಿಸಿದ ನಂತರ 7ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.ಈ ಘಟನೆ ಮಂಗಳವಾರ ನಡೆದಿದ್ದು, ಆತ ಈ ನಿರ್ಧಾರ ತೆಗೆದುಕೊಳ್ಳುವ ಮುನ್ನ ತನ್ನ ಸಹೋದರಿಗೆ ಈ ವಿಷಯ ತಿಳಿಸಿದ್ದನು. ವಿದ್ಯಾರ್ಥಿ ಇಲ್ಲಿನ ಮರಿಯಪ್ಪನಪಾಳ್ಯ ಪ್ರದೇಶದಲ್ಲಿರುವ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ ಎಂದು ಅವರು ಹೇಳಿದರು.

ಆತ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಆತ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಮತ್ತೊಬ್ಬ ವಿದ್ಯಾರ್ಥಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕರು ಆ ಬಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ, ತರಗತಿಯಿಂದ ಹೊರಗೆ ಹೋಗುವಂತೆ ಆತನಿಗೆ ಸೂಚಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದುವರೆಗಿನ ವಿಚಾರಣೆಯಲ್ಲಿ ಇದೊಂದು ತರಗತಿಯಲ್ಲಿನ ಸಣ್ಣ ಸಮಸ್ಯೆ ಎಂದು ಪೊಲೀಸರು ತಿಳಿಸಿದ್ದಾರೆ.

You cannot copy content of this page

Exit mobile version