“ಥಾಂಟ್ ರೇ ಬಾ ಥಾಂಟ್..” ವೀರಾವೇಶದ ಭಾಷಣ : ಎಸ್‌ಡಿ‌ಪಿಐ ಮುಖಂಡ ರಿಯಾಜ್‌ ಫರಂಗಿಪೇಟೆಗೆ 6 ತಿಂಗಳ ಜೈಲು ಶಿಕ್ಷೆ

ಬೆಳ್ತಂಗಡಿ: ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಹಾಗೂ ಸಮಾಜದಲ್ಲಿ ವೈಮನಸ್ಸು ಉಂಟುಮಾಡುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣದಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ ಅವರಿಗೆ ಬೆಳ್ತಂಗಡಿ ನ್ಯಾಯಾಲಯ ಆರು ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿದೆ.

2015ರ ಜುಲೈ 23ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಬೆಳ್ತಂಗಡಿ ವಲಯದ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಹಮ್ಮದ್ ರಿಯಾಜ್ ಫರಂಗಿಪೇಟೆ “ಥಾಂಟ್ ರೇ ಬಾ ಥಾಂಟ್” ಎನ್ನುತ್ತಾ ಪ್ರಚೋದನಕಾರಿ ಭಾಷಣ ಮಾಡಿದ್ದರೆಂಬ ಆರೋಪ ಕೇಳಿಬಂದಿತ್ತು. ಆ ವಿಡಿಯೋ ಆ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲೂ ಹೆಚ್ಚು ಪ್ರಚಾರಕ್ಕೆ ಬಂದಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 315/2015ರಡಿ ಭಾರತೀಯ ದಂಡ ಸಂಹಿತೆಯ (IPC) ಕಲಂ 153(A) ಮತ್ತು 295(A) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಅಂದಿನ ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕ ಹಾಗೂ ತನಿಖಾಧಿಕಾರಿ ರವಿ ಬಿ.ಎಸ್. ಅವರು ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಬೆಳ್ತಂಗಡಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ರಾಮಲಿಂಗಪ್ಪ ಅವರು IPC ಕಲಂ 153(A) ಅಡಿಯಲ್ಲಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ಅವರಿಗೆ ಆರು ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು