Home ರಾಜ್ಯ ಧಾರವಾಡ ಬಿಜೆಪಿಯವರಿಗೆ ರೈತರ ಸಮಸ್ಯೆಗಳ ಬಗ್ಗೆ ಮಾತನಾಡುವ ಅರ್ಹತೆ ಇಲ್ಲ – ಸಚಿವ ಸಂತೋಷ್ ಲಾಡ್

ಬಿಜೆಪಿಯವರಿಗೆ ರೈತರ ಸಮಸ್ಯೆಗಳ ಬಗ್ಗೆ ಮಾತನಾಡುವ ಅರ್ಹತೆ ಇಲ್ಲ – ಸಚಿವ ಸಂತೋಷ್ ಲಾಡ್

ಧಾರವಾಡ: ಬಿಜೆಪಿಯವರಿಗೆ ರೈತರ ಸಮಸ್ಯೆಗಳ ಬಗ್ಗೆ ಮಾತನಾಡುವ ಅರ್ಹತೆ ಇಲ್ಲ ಎಂದು ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ.

ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ 12 ವರ್ಷಗಳಿಂದ ಅಧಿಕಾರದಲ್ಲಿದ್ದರೂ ರೈತರ ಸಾಲಮನ್ನಾ ಮಾಡಿಲ್ಲ ಎಂದು ಆರೋಪಿಸಿದರು. ಬಿಜೆಪಿಯವರು ವಿಶ್ವಗುರು ಬಳಿ ಹೋಗಿ ಹಣ ತರಲಿ. ಎನ್‌ಡಿಎ ಸರ್ಕಾರ ಒಮ್ಮೆಯೂ ರೈತರ ಸಾಲಮನ್ನಾ ಮಾಡಿಲ್ಲ. ಯುಪಿಎ ಸರ್ಕಾರದ ಅವಧಿಯಲ್ಲಿ ಸುಮಾರು 70 ಸಾವಿರ ಕೋಟಿ ರೂ. ರೈತರ ಸಾಲಮನ್ನಾ ಮಾಡಲಾಗಿತ್ತು” ಎಂದು ಸಂತೋಷ್ ಲಾಡ್ ಹೇಳಿದರು.

ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರೈತರ ಸಾಲಮನ್ನಾ ಮಾಡಿದ್ದರು ಎಂದು ಪ್ರಸ್ತಾಪಿಸಿದ ಸಚಿವರು, ಬೆಳೆ ವಿಮೆ ಕಂಪನಿಗಳು ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ಅವುಗಳ ಕಾರ್ಯವೈಖರಿ ಕುರಿತು ಸಂಸತ್ತಿನಲ್ಲಿ ಸಮರ್ಪಕ ಚರ್ಚೆಯಾಗುತ್ತಿಲ್ಲ ಎಂದು ಆರೋಪಿಸಿದರು. ಬೆಳೆ ವಿಮೆ ಕಂಪನಿಗಳ ಬಗ್ಗೆ ಪ್ರಶ್ನಿಸಿದಾಗ ಬೇರೆ ವಿಚಾರಗಳತ್ತ ಗಮನ ಹರಿಸಲಾಗುತ್ತಿದೆ ಎಂದು ಸಚಿವ ಸಂತೋಷ್ ಲಾಡ್ ಕಿಡಿಕಾರಿದರು.

You cannot copy content of this page

Exit mobile version