Home ಬ್ರೇಕಿಂಗ್ ಸುದ್ದಿ ಮುಡಾಗೆ ನಿವೇಶನ ಹಿಂತಿರುಗಿಸಲು ಅನುಮತಿ ಕೋರಿ ಸಿಎಂ ಪತ್ನಿ ಪಾರ್ವತಿಯವರ ಪತ್ರ!

ಮುಡಾಗೆ ನಿವೇಶನ ಹಿಂತಿರುಗಿಸಲು ಅನುಮತಿ ಕೋರಿ ಸಿಎಂ ಪತ್ನಿ ಪಾರ್ವತಿಯವರ ಪತ್ರ!

0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು ಮುಡಾ ಆಯುಕ್ತರಿಗೆ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಈಗ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಮುಡಾ ಪ್ರಕರಣದಲ್ಲಿ ಇಡಿ ಇಲಾಖೆಯು ಹಾಜರಾಗುತ್ತಿದ್ದಂತೆ, ಪ್ರಕರಣದ ಅಡಿಯಲ್ಲಿ ಈ ಪತ್ರ ಮಹತ್ವದ ಪಾತ್ರ ವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿಚಾರ ಏನೆಂದರೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾದ 14 ನಿವೇಶನಗಳನ್ನೂ ಮೂಡಾ ಗೆ ವಾಪಸ್ ನೀಡುವುದಾಗಿ ಕಮೀಷನರ್ ಅವರಿಗೆ ಪತ್ರ ಬರೆದಿದ್ದಾರೆ.

ಇಡಿಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ, ಸಿಎಂ ಕುಟುಂಬ ಅಲರ್ಟ್​ ಆಗಿದೆ ಎನ್ನಲಾಗುತ್ತಿದ್ದು, ಮುಡಾ ಸೈಟ್ ವಾಪಸ್ ಕೊಡುವೆ ಎಂದು ಕಮಿಷನರ್ಗೆ ಪತ್ರ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ.

“ಮೈಸೂರು ತಾಲ್ಲೂಕು, ಕಸಬಾ ಹೋಬಳಿ, ಕೆಸರೆ ಗ್ರಾಮದ ಸರ್ವೇ ನಂ 464 ರಲ್ಲಿ 3 ಎಕರೆ 16 ಗುಂಟೆ ವಿಸ್ತೀರ್ಣದ ನನ್ನ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರವಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ವಿವಿಧ ಅಳತೆಯ 14 ನಿವೇಶನಗಳನ್ನು ಮಂಜೂರು ಮಾಡಿರುವುದು ನಿಮಗೆ ತಿಳಿದಿದೆ.”

“ಮುಂದುವರಿದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನನ್ನ ಪರವಾಗಿ ಕಾರ್ಯಗತಗೊಳಿಸಿದ 14 ನಿವೇಶನಗಳ ಕ್ರಯಪತ್ರಗಳನ್ನು ರದ್ದುಗೊಳಿಸುವ ಮೂಲಕ ನಾನು ಪರಿಹಾರದ ನಿವೇಶನಗಳನ್ನು ಒಪ್ಪಿಸಲು ಮತ್ತು ಹಿಂತಿರುಗಿಸಲು ಬಯಸುತ್ತೇನೆ. ನಿವೇಶನಗಳ ಸ್ವಾಧೀನವನ್ನು ಸಹ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮರಳಿ ಹಸ್ತಾಂತರಿಸುತ್ತಿದ್ದೇನೆ. ದಯವಿಟ್ಟು ಈ ನಿಟ್ಟಿನಲ್ಲಿ ಆದಷ್ಟು ಬೇಗ ಅಗತ್ಯ ಕ್ರಮಗಳನ್ನು ಕೈಗೊಳ್ಳಿ.” ಎಂಬುದಾಗಿ ಪತ್ರದಲ್ಲಿ ಶ್ರೀಮತಿ ಪಾರ್ವತಿಯವರು ಉಲ್ಲೇಖಿಸಿ ಬರೆದಿದ್ದಾರೆ ಎನ್ನಲಾಗಿದೆ.

ಈಗಾಗಲೇ ಈ ಪ್ರಕರಣದಲ್ಲಿ ಮೈಸೂರು ಲೋಕಾಯುಕ್ತದಲ್ಲಿ ಸಿಎಂ ಹಾಗೂ ಅವರ ಪತ್ನಿ ಮತ್ತು ಬಾಮೈದ ವಿರುದ್ಧ FIR ದಾಖಲಾಗಿದೆ. ತನಿಖೆಯ ಹಂತದಲ್ಲಿರುವಾಗಲೇ ಈ ಮಹತ್ವದ ಬೆಳವಣಿಗೆ ಇದೀಗ ನಡೆದಿದೆ.

You cannot copy content of this page

Exit mobile version