Home ಬ್ರೇಕಿಂಗ್ ಸುದ್ದಿ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಿದ ಆಯೋಗ

ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಿದ ಆಯೋಗ

0

ಕರ್ನಾಟಕ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. ಅದರಲ್ಲಿ 3 ಶಿಕ್ಷಕರ ಕ್ಷೇತ್ರ ಹಾಗೂ 3 ಪದವೀಧರ ಕ್ಷೇತ್ರಗಳು ಇದಾಗಿದ್ದು, ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

ಈ ಕುರಿತಂತೆ ಚುನಾವಣಾ ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಕರ್ನಾಟಕದ ಆರು ವಿಧಾನಪರಿಷತ್ತಿನ ಸ್ಥಾನಗಳಿಗೆ ಚುನಾವಣೆ ನಿಗಧಿ ಪಡಿಸಲಾಗಿದೆ.

ಈಶಾನ್ಯ ಪದವೀಧರ, ನೈರುತ್ಯ ಪದವೀಧರರ ಹಾಗೂ ಬೆಂಗಳೂರು ಪದವೀಧರರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ ಎಂದಿದೆ.

ಆರು ವಿಧಾನಪರಿಷತ್ತಿನ ಚುನಾವಣೆ ನಾಮಪತ್ರ ಸಲ್ಲಿಸಲು ಮೇ.16 ಕೊನೆಯ ದಿನವಾಗಿದೆ. ನಾಮಪತ್ರವನ್ನು ಹಿಂಪಡೆಯಲು ಮೇ.20 ಕೊನೆಯ ದಿನವಾಗಿದೆ. ಜೂನ್.3ರಂದು ಮತದಾನ ನಡೆದು, ಜೂನ್.6ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದೆ.

You cannot copy content of this page

Exit mobile version