ಮೇ 24, 2024ರಿಂದ ಜಾರಿಗೆ ಬರುವಂತೆ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ / ಪಾನ್ ಮಸಾಲಾ ತಯಾರಿಕೆ, ಸಂಗ್ರಹಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ನಿಷೇಧಿಸಿ ತೆಲಂಗಾಣದ ಆಹಾರ ಸುರಕ್ಷತಾ ಆಯುಕ್ತರು ಶನಿವಾರ ಪ್ರಕಟಣೆ ಹೊರಡಿಸಿದ್ದಾರೆ.
ತೆಲಂಗಾಣವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಲು ಕಾಂಗ್ರೆಸ್ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಡ್ರಗ್ಸ್ ಸರಬರಾಜು ಮತ್ತು ಮಾರಾಟ ಮಾಡುವವರ ವಿರುದ್ಧ ಕಡಿವಾಣ ಹಾಕುವುದಾಗಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೇಳಿದ್ದಾರೆ.
ತೆಲಂಗಾಣದಾದ್ಯಂತ ಗುಟ್ಕಾ ತಯಾರಿಕೆ ಮತ್ತು ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಸರ್ಕಾರ ತೆಗೆದುಕೊಂಡಿರುವ ಈ ನಿರ್ಧಾರವು 24 ಮೇ 2024ರಿಂದ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ ಯುವಕರು ಮಾದಕ ದ್ರವ್ಯ, ಗಾಂಜಾ ಮತ್ತು ಮಾದಕ ವ್ಯಸನಕ್ಕೆ ಒಳಗಾಗಿ ತಮ್ಮ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ಯುವಕರ ಬದುಕು ಹಾಳಾಗಬಾರದೆನ್ನುವ ಕಾರಣಕ್ಕಾಗಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.

ತಂಬಾಕು ಮತ್ತು ನಿಕೋಟಿನ್ ಅನ್ನು ಒಂದು ಘಟಕಾಂಶವಾಗಿ ಒಳಗೊಂಡಿರುವ ಗುಟ್ಕಾ ಮತ್ತು ಪಾನ್ ಮಸಾಲಾವನ್ನು ಸ್ಯಾಚೆಟ್ ಗಳು / ಪೌಚ್ ಗಳು / ಪ್ಯಾಕೇಜ್ ಕಂಟೇನರ್ ಗಳಲ್ಲಿ ಪ್ಯಾಕ್ ಮಾಡಲಾಗುತ್ತದೆ, ಅಥವಾ ಇಡೀ ತೆಲಂಗಾಣ ರಾಜ್ಯದಲ್ಲಿ ಮೇ 24, 2ರಿಂದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಗೆ ನಿಷೇಧಿಸಲಾಗಿದೆ.