Thursday, July 11, 2024

ಸತ್ಯ | ನ್ಯಾಯ |ಧರ್ಮ

ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣನನ್ನು ಇನ್ನೂ ಎರಡು ದಿನ ಪೊಲೀಸ್ ಕಸ್ಟಡಿಗೆ ಸೂಚಿಸಿದ ಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಪೊಲೀಸರಿಂದ ಬಂಧಿಸಲ್ಪಟ್ಟು, ಈಗ ಸಿಐಡಿ ವಶದಲ್ಲಿರುವ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಅವರಿಗೆ ಮತ್ತೆ 2 ದಿನ ಪೊಲೀಸ್ ಕಸ್ಟಡಿ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ.

ಇಷ್ಟು ದಿನ ಪೊಲೀಸ್ ಕಸ್ಟಡಿಯಲ್ಲಿ ಇದ್ದ ಸೂರಜ್ ರೇವಣ್ಣ ಪೊಲೀಸ್ ಕಸ್ಟಡಿ ಅವಧಿ ಇಂದು ಕೊನೆಗೊಂಡಿತ್ತು. ಹಾಗಾಗಿ ಪೊಲೀಸರು ಇಂದು ಸೂರಜ್‌ ರೇವಣ್ಣನನ್ನು ಕೋರ್ಟ್ ಗೆ ಹಾಜರುಪಡಿಸಿದ್ದಾರೆ.

ಹೆಚ್ಚಿನ ವಿಚಾರಣೆಗಾಗಿ ಮತ್ತೆ 5 ದಿನ ತಮ್ಮ ಕಸ್ಟಡಿಗೆ ನೀಡುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದ್ದರು.

ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಡಾ.ಸೂರಜ್ ರೇವಣ್ಣ ಅವರನ್ನು ಮತ್ತೆ 2 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

Related Articles

ಇತ್ತೀಚಿನ ಸುದ್ದಿಗಳು