ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಪೊಲೀಸರಿಂದ ಬಂಧಿಸಲ್ಪಟ್ಟು, ಈಗ ಸಿಐಡಿ ವಶದಲ್ಲಿರುವ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಅವರಿಗೆ ಮತ್ತೆ 2 ದಿನ ಪೊಲೀಸ್ ಕಸ್ಟಡಿ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ.
ಇಷ್ಟು ದಿನ ಪೊಲೀಸ್ ಕಸ್ಟಡಿಯಲ್ಲಿ ಇದ್ದ ಸೂರಜ್ ರೇವಣ್ಣ ಪೊಲೀಸ್ ಕಸ್ಟಡಿ ಅವಧಿ ಇಂದು ಕೊನೆಗೊಂಡಿತ್ತು. ಹಾಗಾಗಿ ಪೊಲೀಸರು ಇಂದು ಸೂರಜ್ ರೇವಣ್ಣನನ್ನು ಕೋರ್ಟ್ ಗೆ ಹಾಜರುಪಡಿಸಿದ್ದಾರೆ.
ಹೆಚ್ಚಿನ ವಿಚಾರಣೆಗಾಗಿ ಮತ್ತೆ 5 ದಿನ ತಮ್ಮ ಕಸ್ಟಡಿಗೆ ನೀಡುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದ್ದರು.
ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಡಾ.ಸೂರಜ್ ರೇವಣ್ಣ ಅವರನ್ನು ಮತ್ತೆ 2 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.