ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಇದ್ದ ಆಸೆಗೆ ತಣ್ಣೀರು ಎರಚಿ ಕೋರ್ಟ್ ಬಿಗ್ ಶಾಕ್ ನೀಡಿದೆ.
ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಅತ್ಯಾಚಾರ ಪ್ರಕರಣ ಸಂಬಂಧ ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನಡೆಸಿ, ತೀರ್ಪು ಕಾಯ್ದಿರಿಸಿದ್ದರು.
ಮೂರು ಅತ್ಯಾಚಾರ ಮತ್ತು ಒಂದು ಲೈಂಗಿಕ ದೌರ್ಜನ್ಯ, ಮಹಿಳೆಯ ಘನತೆಗೆ ಧಕ್ಕೆ ಉಂಟು ಮಾಡಿದಂತ ಆರೋಪದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣ ಆಸೆಗೆ ತಣ್ಣೀರು ಎರಚಿದೆ.
ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮನೆ ಕೆಲಸದಾಕೆ ನೀಡಿರುವ ದೂರಿನ ಅನ್ವಯ ದಾಖಲಾಗಿದ್ದಂತ ಅತ್ಯಾಚಾರ ಕೇಸ್, ಸೇರಿದಂತೆ ಮೂರು ಅತ್ಯಾಚಾರ ಮತ್ತು ಒಂದು ಲೈಂಗಿಕ ದೌರ್ಜನ್ಯ ಪ್ರಕರಣದ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.
ಇನ್ನೂ ಹಾಸನ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯ ತೀರ್ಪು ಇನ್ನೆರಡು ದಿನಗಳಲ್ಲಿ ಪ್ರಕಟಿಸುವುದಾಗಿ ಹೈಕೋರ್ಟ್ ನ್ಯಾಯಪೀಠ ತಿಳಿಸಿದೆ.