ಹಾಸನ: ಧ್ವೇಷದ ರಾಜಕಾರಣಕ್ಕೆ ಜಿಲ್ಲೆಯ ಅಭಿವೃದ್ಧಿ ಕೆಲಸ ಸ್ಥಗಿತವಾಗಿದ್ದು, ಸರಕಾರ ಹಣ ಬಿಡುಗಡೆ ಮಾಡಿದರೂ ಡಿಸಿ ಹಣ ಬಿಡುಗಡೆ ಮಾಡದೇ ಖಜಾನೆಯಲ್ಲಿಟ್ಟುಕೊಂಡಿರುವುದಾಗಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅಸಮಧಾನವ್ಯಕ್ತಪಡಿಸಿ ಆಕ್ರೋಶವ್ಯಕ್ತಪಡಿಸಿದರು.ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಸರ್ಕಾರ ಸಂಪೂರ್ಣ ದ್ವೇಷದ ರಾಜಕಾರಣ ಮಾಡುತ್ತಿದ್ದು, ಇದರಿಂದಲೇ ಹಾಸನ ಜಿಲ್ಲೆಯಲ್ಲಿ ಕಾಮಗಾರಿಗಳೆಲ್ಲಾ ನಿಂತು ಹೋಗಿದೆ.
ಅದಕ್ಕೆ ಅವಕಾಶ ಕೊಡಬೇಡಿ. ಹಾಸನ ಯೂನಿವರ್ಸಿಟಿ ಮುಚ್ಚುವ ಬದಲು ಅದಕ್ಕೆ ಬೇಕಾದ ಸೌಲಭ್ಯ ಒದಗಿಸಬೇಕು. ಜಿಲ್ಲಾಸ್ಪತ್ರೆಯಲ್ಲಿ ಲೂಟಿ ನಡೆಯುತ್ತಿದ್ದು, ಹಿಮ್ಸ್ ನಿರ್ದೇಶಕರ ಮಾತು ನಡೆಯುತ್ತಿಲ್ಲ. ಹಾಸನ ಕೃಷಿ ಕಾಲೇಜನ್ನು ಮಂಡ್ಯ ಯುನಿವರ್ಸಿಟಿಗೆ ಸೇರಿಸುತ್ತಿದ್ದು, ಕೃಷಿ ಕಾಲೇಜು ಬೆಂಗಳೂರು ಯುನಿವರ್ಸಿಟಿ ವ್ಯಾಪ್ತಿಯಲ್ಲೇ ಇರಲಿ. ಈ ಎಲ್ಲಾ ವಿಚಾರ ಇಟ್ಟುಕೊಂಡು ಮಂದೆ ನಡೆಯುವ ವಿಧಾನಸಭೆ ಅಧಿವೇಶನದಲ್ಲಿ ಈ ಬಗ್ಗೆ ಹೋರಾಟ ಮಾಡುತ್ತೇವೆ.
ಜೆಡಿಎಸ್‌ನ ನಾಲ್ಕು ಶಾಸಕರು ಒಟ್ಟಾಗಿ ಹೋರಾಟ ಮಾಡುತ್ತೇವೆ. ಈ ಹೋರಾಟಕ್ಕೆ ಬಿಜೆಪಿ ಶಾಸಕರ ಸಹಕಾರ ಕೋರುತ್ತೇವೆ ಎಂದರು. ಸರ್ಕಾರವು ೧೨ ಕೋಟಿ ಮಳೆಹಾನಿಗೆ ಹಣ ಬಿಡುಗಡೆ ಮಾಡಿದೆ. ಡಿಸಿ ಅದನ್ನು ಹಾಗೆಯೇ ಇಟ್ಟುಕೊಂಡಿದ್ದಾರೆ. ಗುಂಡಿ ಮುಚ್ಚಲು ಡಿಸಿ ಹಣ ಕೊಡುತ್ತಿಲ್ಲ. ಬಿಡುಗಡೆಯಾಗಿರುವ ಹಣವನ್ನು ಖಜಾನೆಯಲ್ಲಿ ಇಟ್ಟುಕೊಂಡಿದ್ದು, ಡಿಸಿಯವರು ಹಣ್ಣು, ಕಾಯಿ ಹೊಡೆದು ದೀಪ ಹಚ್ಚಿ ಪೂಜೆ ಮಾಡಲಿ ಎಂದು ವ್ಯಂಗ್ಯವಾಡಿದ ಅವರು, ಇದೇ ರೀತಿ ಮುಂದುವರೆದರೆ ಡಿಸಿ ಕಚೇರಿ ಎದುರು ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು. ಸರ್ಕಾರಿ ನೌಕರರಿಗೆ ಸರಿಯಾಗಿ ಸಂಬಳ ಕೊಡುತ್ತಿಲ್ಲ.
ಅಧಿಕಾರಿಗಳು ಲೂಟಿ ಮಾಡಲು ಜಿ.ಪಂ. ಚುನಾವಣೆ ಮುಂದೂಡುತ್ತಿದ್ದಾರೆ. ಮಂಡ್ಯ ಜಿಲ್ಲೆಗೆ ಏನು ಬೇಕು ಚೆಲುವರಾಯಸ್ವಾಮಿ ಮಾಡಲಿ. ಮಂಡ್ಯ ಜನರ ಬಗ್ಗೆ ನನಗೆ ವಿಶ್ವಾಸವಿದೆ. ಮಂಡ್ಯ ಜಿಲ್ಲೆಗೆ ಕುಮಾರಸ್ವಾಮಿ, ನನ್ನ ಕೊಡುಗೆ ಏನಿದೆ ಎಂಬುದನ್ನು ನೋಡಲಿ. ಮಂಡ್ಯ ಜಿಲ್ಲೆ ನಮಗೆ ರಾಜಕೀಯವಾಗಿ ಶಕ್ತಿ ಕೊಟ್ಟಿದ್ದಾರೆ. ಮಂಡ್ಯಕ್ಕೆ ಏನು ಮಾಡಿದ್ದೇನೆ ಎಂದು ಚರ್ಚೆಗೆ ಬರಲಿ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿಗೆ ಎಚ್.ಡಿ. ರೇವಣ್ಣ ತಿರುಗೇಟು ನೀಡಿದರು. ಕಾಂಗ್ರೆಸ್ ಸರ್ಕಾರದ್ದು ಮುಚ್ಚುವ ಕೆಲಸವೇ ಹೊರತು ಅಭಿವೃದ್ಧಿ ಮಾಡುವುದಿಲ್ಲ. ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದು, ಅಧಿಕಾರಿಗಳೇ ಸೆಕೆಂಡ್ಸ್ ಮಾರಿಸುತ್ತಿದ್ದಾರೆ. ಅಬಕಾರಿ ಇಲಾಖೆ ಇದುವರೆಗೂ ಒಂದು ಪ್ರಕರಣ ದಾಖಲಿಸಿಲ್ಲ. ಪೆಟ್ಟಿಗೆ ಅಂಗಡಿಗಳಲ್ಲಿ ಯಾವ ಬ್ರಾಂಡ್ ಬೇಕಾದರೂ ಸಿಗುತ್ತಿದೆ ಎಂದು ಆಕ್ರೋಶವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಮಾಡಲಿ ಆದರೇ ಈ ಸರಕಾರದು ಮುಚ್ಚುವುದೆ ಹೊರತು ಯಾವ ಅಭಿವೃದ್ಧಿ ಮಾಡುವುದಿಲ್ಲ. ಮುಂದೆ ನಮಗೆ ಶಕ್ತಿ ಕೊಟ್ಟಾಗ ಜನರ ಎಲ್ಲಾ ಅಭಿವೃದ್ಧಿ ಕೆಲಸ ಮಾಡಲಾಗುವುದು ಎಂದು ವಿಶ್ವಾಸವ್ಯಕ್ತಪಡಿಸಿದರು.