ಹಾಸನ : ಹಾಸನದಲ್ಲಿ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಶೀಘ್ರ ಕಾರ್ಯಾರಂಭ ಮತ್ತು ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಸಬಲೀಕರಣಗೊಳಿಸುವಂತೆ ಆಗ್ರಹಿಸಿ ಆಗಸ್ಟ್ 15 ರಂದು ಹಾಸನದ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಆವರಣದಲ್ಲಿ ಜಿಲ್ಲೆಯ ಜನಪರ ಚಳುವಳಿಗಳ ನೇತೃತ್ವದಲ್ಲಿ ನಡೆಯುತ್ತಿರುವ ‘ಜನಾರೋಗ್ಯದ ಸ್ವಾತಂತ್ರ್ಯಕ್ಕಾಗಿ ಸಾಮೂಹಿಕ ಧರಣಿ ಸತ್ಯಾಗ್ರಹ’ ಸ್ಥಳಕ್ಕೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು, ಮಾನ್ಯ ಸಂಸದರು, ಮಾನ್ಯ ಶಾಸಕರು ಇವರುಗಳೊಂದಿಗೆ ತಾವು ಬಂದು ‘ಜನಾರೋಗ್ಯಕ್ಕಾಗಿ ಜನಾಂದೋಲನ’ದ ಮನವಿ ಸ್ವೀಕಸಿಸಬೇಕೆಂದು ಕೋರಿ ಜಿಲ್ಲಾಧಿಕಾರಿ ಲತಾ ಕುಮಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಇದೆ ವೇಳೆ ಹೋರಾಟಗಾರರು ಮಾತನಾಡಿ, ನಗರದಲ್ಲಿ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೂಡಲೇ ಆರಂಭಿಸುವಂತೆ ಹಾಗೂ ಹಾಸನ ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಾರತೀಯ ಸಾರ್ವಜನಿಕ ಆರೋಗ್ಯ ಮಾನದಂಡಗಳಿಗೆ (ಐ.ಪಿ.ಎಚ್.ಎಸ್.) ಅನುಗುಣವಾಗಿ ಸೌಲಭ್ಯಗಳನ್ನು ನೀಡಿ ಉನ್ನತೀಕರಿಸಿ ಸಬಲೀಕರಿಸುವಂತೆ ಆಗ್ರಹಿಸಿ ಹಾಸನ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟದ ನೇತೃತ್ವದಲ್ಲಿ ‘ಜನಾರೋಗ್ಯಕ್ಕಾಗಿ ಜನಾಂದೋಲನ’ ಆರಂಭಿಸಲಾಗಿದೆ. ಜಿಲ್ಲೆಯ ದಲಿತ ಸಂಘಟನೆಗಳೂ ಇದರ ಭಾಗವಾಗಿದ್ದು, ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದ ಹಾಸನದ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟದ ಮುಂದೆ ‘ಜನಾರೋಗ್ಯದ ಸ್ವಾತಂತ್ರ್ಯಕ್ಕಾಗಿ ಸಾಮೂಹಿಕ ಧರಣಿ ಸತ್ಯಾಗ್ರಹ’ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಈ ಸಂಧರ್ಭದಲ್ಲಿ ಧರ್ಮೇಶ್, ಹಿರಿಯ ಪತ್ರಕರ್ತರಾದ .ಪಿ ವೆಂಕಟೇಶ್ ಮಾದಿಗ ದಂಡೋರ ವಿಜಿ ಕುಮಾರ್ ರೂಪ ಹಾಸನ, ಅನ್ಶಾದ್ ಪಾಳ್ಯ, ಭಾನುಮತಿ, ಮಮತ ಶಿವು, ನವೀನ್ ಕುಮಾರ್ ಪೃಥ್ವಿ, ತೌಸಿಫ್ ಎಂ.ಜಿ, ರಮೇಶ್ ಇನ್ನಿತರು ಉಪಸ್ಥಿತರಿದ್ದರು.