Home ಬೆಂಗಳೂರು ಆರ್ಥಿಕ ಸಾಮಾಜಿಕ ಸಮೀಕ್ಷೆ-ಬಿಜೆಪಿ ರಾಜಕಾರಣ ಮಾಡುತ್ತಿದೆ | ಸಮೀಕ್ಷೆ ಬಗ್ಗೆ ಅಂತಿಮ ತೀರ್ಮಾನ ಹಿಂದುಳಿದ ವರ್ಗದ...

ಆರ್ಥಿಕ ಸಾಮಾಜಿಕ ಸಮೀಕ್ಷೆ-ಬಿಜೆಪಿ ರಾಜಕಾರಣ ಮಾಡುತ್ತಿದೆ | ಸಮೀಕ್ಷೆ ಬಗ್ಗೆ ಅಂತಿಮ ತೀರ್ಮಾನ ಹಿಂದುಳಿದ ವರ್ಗದ ಆಯೋಗವೇ ಕೈಗೊಳ್ಳಲಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

0

ಬೆಂಗಳೂರು, ಸೆಪ್ಟೆಂಬರ್ 19: ಹಿಂದುಳಿದ ವರ್ಗಗಳ ಆಯೋಗ ಶಾಸನಬದ್ಧ ಸಂಸ್ಥೆಯಾಗಿದ್ದು, ಅವರಿಗೆ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಸಮೀಕ್ಷೆಯ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಅಂತಿಮ ನಿರ್ಧಾರ ಆಯೋಗವೇ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಾರ್ತಾಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಆರ್ಥಿಕ, ಸಾಮಾಜಿಕ ಸಮೀಕ್ಷೆಗೆ ಸಚಿವಸಂಪುಟದಲ್ಲಿ ವಿರೋಧ ವ್ಯಕ್ತವಾಗಿರುವ ಬಗ್ಗೆ ಪರ್ತಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿಯವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ. ಇದನ್ನು ಎಲ್ಲ ಸಚಿವರೂ ಒಕ್ಕೊರಲಿನಿಂದ ಖಂಡಿಸಬೇಕು ಎಂದು ಎಲ್ಲ ಸಚಿವರಿಗೂ ಸೂಚಿಸಲಾಗಿದೆ. ಸಮೀಕ್ಷೆಯು ಸೆಪ್ಟೆಂಬರ್ 22 ರಿಂದ ಪ್ರಾರಂಭವಾಗಲಿದ್ದು, ಸಮೀಕ್ಷೆಯನ್ನು ಮುಂದೂಡುವುದಿಲ್ಲ ಎಂದರು.

You cannot copy content of this page

Exit mobile version