Wednesday, July 30, 2025

ಸತ್ಯ | ನ್ಯಾಯ |ಧರ್ಮ

ಬಿಜೆಪಿಗೆ ಮತ್ತೊಂದು ಶಾಕ್: ಕಾಂಗ್ರೆಸ್ ಸೇರಲಿರುವ ಯುವ ಘಟಕದ ಮಾಜಿ ಅಧ್ಯಕ್ಷ ಡಾ.ಸಂದೀಪ್

ಬೆಂಗಳೂರು: ಲೋಕಸಭಾ ಚುನಾವಣೆಗಳು ಸನ್ನಿಹಿತವಾಗುತ್ತಿರುವಂತೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವವರ ಪಟ್ಟಿ ಬೆಳೆಯುತ್ತಿದ್ದು, ಬಿಜೆಪಿ ರಾಜ್ಯ ಯುವ ಮೋರ್ಚಾ ನಿಕಟಪೂರ್ವ ಅಧ್ಯಕ್ಷ ಡಾ.ಸಂದೀಪ್ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ.

ಡಾ.ಸಂದೀಪ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತುಕತೆಗಳು ನಡೆದಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಏಪ್ರಿಲ್ ಮೊದಲ ವಾರದಲ್ಲೇ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಪರಿಶಿಷ್ಟ ಜಾತಿಗೆ ಸೇರಿದ ಪ್ರಬಲ ನಾಯಕರಲ್ಲಿ ಒಬ್ಬರಾದ ಡಾ.ಸಂದೀಪ್ ಬಿಜೆಪಿಯಲ್ಲಿ ತಳಹಂತದಿಂದ ಹಿಡಿದು ಬಿಜೆಪಿ ಯುವ ಘಟಕದ ಅಧ್ಯಕ್ಷ ಸ್ಥಾನದವರೆಗೆ ಕ್ರಿಯಾಶೀಲವಾಗಿ ದುಡಿದು ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದರು. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಕಲೇಶಪುರ-ಆಲೂರು ಅಥವಾ ಆನೇಕಲ್ ವಿಧಾನಸಭಾ ಕ್ಷೇತ್ರಗಳ ಪೈಕಿ ಒಂದರಲ್ಲಿ ಅವರನ್ನು ಸ್ಪರ್ಧೆಗೆ ಇಳಿಸುವುದಾಗಿ ಬಿಜೆಪಿ ಮತ್ತು ಆರ್ ಎಸ್ ಎಸ್ ನಾಯಕರು ಭರವಸೆ ನೀಡಿದ್ದರಾದರೂ ಕೊನೆಘಳಿಗೆಯಲ್ಲಿ ಟಿಕೆಟ್ ವಂಚಿತರಾಗಿದ್ದರು.

ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಿಂದ ಕಣಕ್ಕೆ ಇಳಿಸುವುದಾಗಿ ಡಾ. ಸಂದೀಪ್ ಅವರಿಗೆ ಭರವಸೆ ನೀಡಿ ಸಮಾಧಾನ ಮಾಡಲಾಗಿತ್ತಾದರೂ, ಅಲ್ಲೂ ಸಹ ಟಿಕೆಟ್ ನೀಡಲಿಲ್ಲ‌.

Related Articles

ಇತ್ತೀಚಿನ ಸುದ್ದಿಗಳು

You cannot copy content of this page