Friday, January 9, 2026

ಸತ್ಯ | ನ್ಯಾಯ |ಧರ್ಮ

22 ಮಸೂದೆಗಳ ಪೈಕಿ, ದ್ವೇಷ ಭಾಷಣ ತಡೆ ವಿಧೇಯಕಕ್ಕೆ ಬೀಳದ ಗವರ್ನರ್​​​​​​ ಸಹಿ

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರದ (Karnataka Government) 22 ಮಸೂದೆಗಳ ಪೈಕಿ 19 ಮಸೂದೆಗಳಿಗೆ ಮಾತ್ರ ರಾಜ್ಯಪಾಲ ಥಾವರ್ ಚಂದ್​​​​​ ಗೆಹ್ಲೋಟ್ ಅವರು ಸಹಿ ಮಾಡಿದ್ದಾರೆ.

ಸ್ಪಷ್ಟನೆ ಕೋರಿ ಕೆಲ ಮಸೂದೆಗಳನ್ನು ಸರ್ಕಾರಕ್ಕೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ. ಪ್ರಮುಖವಾಗಿ ದ್ವೇಷ ಭಾಷಣ ತಡೆ ವಿಧೇಯಕಕ್ಕೆ ರಾಜ್ಯಪಾಲರು ಸಹಿ ಮಾಡಿಲ್ಲ ಎಂದು ತಿಳಿದುಬಂದಿದೆ.

ಕಾನೂನು ತಜ್ಞರ ಜೊತೆಗೆ ಚರ್ಚೆಗೆ ರಾಜ್ಯಪಾಲರು ನಿರ್ಧರಿಸಿ ಈ ಮಸೂದೆಗಳಿಗೆ ಸಹಿ ಹಾಕದೆ ಸರ್ಕಾರಕ್ಕೆ ಕಳುಹಿಸಿದ್ದಾರೆ. ಇನ್ನು ಚಾಮುಂಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಮಸೂದೆ, ಪರಿಶಿಷ್ಟ ವರ್ಗಗಳ ಕುರಿತಾದ ವಿಧೇಯಕವನ್ನು ಗವರ್ನರ್ ವಾಪಸ್ ಕಳುಹಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page