ಬೆಂಗಳೂರು : ರಾಜ್ಯದಲ್ಲಿ ಮತ್ತೆ (Karnataka ) ಮಳೆಯಾಗುವ (rain ) ಸಾಧ್ಯತೆ ದಟ್ಟವಾಗಿದೆ. ವಿವಿಧ ಕಡೆಗಳಲ್ಲಿ 2 ದಿನ ಬಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ (weather forecast ) ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ 17ವರೆಗೂ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಜೋರಾಗಿರಲಿದ್ದು, ಉತ್ತರ ಹಾಗೂ ದಕ್ಷಿಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಮಳೆ ಮತ್ತಷ್ಟು ಬಿರುಸುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಎಲ್ಲೆಲ್ಲಿ ಮಳೆ..?
ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ಬಳ್ಳಾರಿ, ಮಂಡ್ಯ, ಮೈಸೂರು ಮತ್ತು ವಿಜಯನಗರ ಜಿಲ್ಲೆಗಳು. ಬೆಂಗಳೂರು ಗ್ರಾಮೀಣ, ಬೆಂಗಳೂರು, ಚಾಮರಾಜನಗರ ಸೇರಿದಂತೆ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಯಲ್ಲೋ ಅಲರ್ಟ್..
ರಾಜಧಾನಿ ಬೆಂಗಳೂರಿನಲ್ಲಿ ಮಳೆ ಅಬ್ಬರ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಬಳ್ಳಾರಿ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಬೀದರ್, ಗದಗ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.