Wednesday, May 28, 2025

ಸತ್ಯ | ನ್ಯಾಯ |ಧರ್ಮ

ಪೌರ ನೌಕರರ ಮುಷ್ಕರ ಕಸ ಸಂಗ್ರಹ ನೀರು ಪೂರೈಕೆ ಎಲ್ಲಾ ಬಂದ್

ಹಾಸನ : ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರನೌಕರರು, ಕಸ ಸಂಗ್ರಹ, ವಿಲೇವಾರಿ, ಸ್ವಚ್ಛತೆ, ನೀರು ಪೂರೈಕೆ, ಒಳಚರಂಡಿ ನಿರ್ವಹಣೆ ಸ್ಥಗಿತಗೊಳಿಸಿ ನಗರಸಭೆ ಆವರಣದಲ್ಲಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದಿಂದ ತಮ್ಮ ಅನಿರ್ಧಿಷ್ಟವಧಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿತು. ಇದೆ ವೇಳೆ ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ. ಯೋಗೇಶ್ ಮಾಧ್ಯಮದೊಂದಿಗೆ ಮಾತನಾಡಿ, ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಿ ಜ್ಯೋತಿ ಸಂಜೀವಿನಿ, ಕೆಜಿಐಡಿ, ಸೇರಿದಂತೆ ಸರ್ಕಾರಿ ನೌಕರ ಪಡೆಯುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜು ಚಾಲಕರು, ಲೋಡರ್ಸ್ ಕ್ಲೀನರ್ಸ್, ಗಾರ್ಡನರ್, ಯುಜಿಡಿ ಸಹಾಯಕರು ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು ಎಂದರು. ಕೌರ ಕಾರ್ಮಿಕರನ್ನು ದಿನಗೂಲಿ, ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಾಮಾನ ವೇತನ: ನೌಕರರನ್ನು ಖಾಯಂ ಮಾಡುವುದು ಹಾಗೂ ಎಲ್ಲಾ ನೌಕರರಿಗೆ ಎಸ್.ಎಫ್.ಸಿ. ಮುಕ್ತ ನಿಧಿಯಿಂದ ವೇತನ ನೀಡಬೇಕು ಎಂದು ಆಗ್ರಹಿಸಿದರು. ರಂಜಾನ ಹಬ್ಬದ ನಂತರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ರಾಜ್ಯ ಪದಾಧಿಕಾರಿಗಳೊಂದಿಗೆ ಮಾನ್ಯ ಮುಖ್ಯ ಮಂತ್ರಿಗಳ ಎದುರಿಗೆ ಸಭೆ ನಡೆಸಲು ದಿನಾಂಕ ನೀಡುವುದಾಗಿಯೂ ಸಹ ಭರವಸೆ ನೀಡಿದ್ದರು. ಆದರೆ ನಮ್ಮ ಬೇಡಿಕೆಗಳ ಈಡೇರಿಕೆ ಬಗ್ಗೆ ಪ್ರಸ್ತುತ ಇಲ್ಲಿಯವರೆಗೂ ಚರ್ಚಿಸಲು ಆಹ್ವಾನಿಸಿರುವುದಿಲ್ಲ. ನಗರದಲ್ಲಿ ರಾಜ್ಯ ಪರಿಷತ್‌ನ ಸರ್ವ ಸದಸ್ಯರ ಸಭೆಯನ್ನು ಕರೆದು ರಾಜ್ಯ ಪರಿಷತ್ ಸಭೆಯಲ್ಲಿ ತೀರ್ಮಾನಿಸಿದಂತೆ ಘನ ಸರ್ಕಾರಕ್ಕೆ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು 45 ದಿನಗಳ ಅನಿರ್ದಿಷ್ಠಾವದಿ ಮುಷ್ಕರದ ನೋಟೀಸ್‌ನ್ನು ನೀಡಲಾಗಿರುತ್ತದೆ. ಪೌರ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಕಸ ಸಂಗ್ರಹ, ವಿಲೇವಾರಿ, ಸ್ವಚ್ಛತೆ, ನೀರು ಪೂರೈಕೆ, ಒಳಚರಂಡಿ ನಿರ್ವಹಣೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಶಾಖಾ ಅಧ್ಯಕ್ಷ ಎನ್.ಆರ್. ವೆಂಕಟೇಶ್, ಉಪಾಧ್ಯಕ್ಷ ರಮೇಶ್, ಪ್ರಧಾನ ಕಾರ್ಯದರ್ಶಿ ರಂಜನ್, ಖಜಾಂಚಿ ಹೆಚ್.ಜಿ. ರಾಮು ಇತರರು ಉಪಸ್ಥಿತರಿದ್ರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page