ನೇಪಾಳದಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆಗುವ ವೇಳೆ ವಿಮಾನವೊಂದು ಪತನಗೊಂಡಿದೆ. ಈ ಘಟನೆಯಲ್ಲಿ 19 ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ಅಪಘಾತ ಸಂಭವಿಸಿದ ತಕ್ಷಣ ತುರ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರೂ ಪ್ರಯೋಜನವಾಗಲಿಲ್ಲ. ವಿಮಾನ ಟೇಕಾಫ್ ಆಗುತ್ತಿದ್ದ ವೇಳೆ ರನ್ವೇಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಪಘಾತದ ಬಗ್ಗೆ ನೇಪಾಳ ಸರ್ಕಾರ ತನಿಖೆಗೆ ಆದೇಶಿಸಿದೆ.