Saturday, June 28, 2025

ಸತ್ಯ | ನ್ಯಾಯ |ಧರ್ಮ

ಮುಂದುವರೆಯಲಿರುವ ಮಳೆಯ ಅಬ್ಬರ ; ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ರಾಜ್ಯಾದ್ಯಂತ ಇಂದೂ ಸಹ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದೂ ಸಹ ಕರಾವಳಿ ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಸೇರಿದಂತೆ ಮಲೆನಾಡಿನ ಹಲವು ಪ್ರದೇಶಗಳಲ್ಲಿ ಮಳೆಯ ಅಬ್ಬರ ಮುಂದುವರೆಯುವ ಬಗ್ಗೆ ಮುನ್ಸೂಚನೆ ನೀಡಿದೆ. ಒಟ್ಟು ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.

ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮುಂದಿನ ಒಂದು ವಾರ ಮಳೆ ಮುಂದುವರೆಯಲಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜು.17 ಮತ್ತು 18ರಂದು ಹಾಗೂ ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಮುಂದಿನ 24 ಗಂಟೆ ರೆಡ್ ಅಲರ್ಟ್ ನೀಡಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page