Wednesday, November 26, 2025

ಸತ್ಯ | ನ್ಯಾಯ |ಧರ್ಮ

‘ದಿ ರೈಸ್ ಆಫ್ ಅಶೋಕ’ ಸಿನಿಮಾದ ಏಳೋ ಮಾದೇವ ಹಾಡು ಬಿಡುಗಡೆ

ಬೆಂಗಳೂರು : ಸತೀಶ್ ನೀನಾಸಂ ಅವರ ಭತ್ತಳಿಕೆಯಿಂದ‌ ಬರ್ತಿರುವ ಬಹು ನಿರೀಕ್ಷಿತ ಸಿನಿಮಾ ‘ದಿ ರೈಸ್ ಆಫ್ ಅಶೋಕ’. ಟೈಟಲ್ ಹಾಗೂ ಕಂಟೆಂಟ್ ಮೂಲಕ ಪ್ರೇಕ್ಷಕರ ವಲಯದಲ್ಲಿ ಕುತೂಹಲ ಗರಿಗೆದರುವಂತೆ ಮಾಡಿರುವ ಈ ಚಿತ್ರದ ಮೊದಲ ಹಾಡು ಅನಾವರಣಗೊಂಡಿದೆ. ಮಾದೇವನ ಕುರಿತ ಹಾಡನ್ನು ಬೆಂಗಳೂರಿನ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಸ್ವತಃ ಸತೀಶ್ ಏಳೋ ಏಳೋ ಮಹಾದೇವ ಗೀತೆ ಕ್ಯಾಚಿ‌ಮ್ಯಾಚಿ ಪದ ಪೊಣಿಸಿ ಸಾಹಿತ್ಯ ಬರೆದಿದ್ದಾರೆ.

ಹಾಡು ಬಿಡುಗಡೆ ಬಳಿಕ ಭಾವುಕರಾಗಿಯೇ ಮಾತನಾಡಿದ ಸತೀಶ್‌ ನೀನಾಸಂ, ‘ಅಯೋಗ್ಯ ಲೆಕ್ಕ ಅಲ್ಲಾ ನನಗೆ, ಮನೇಲಿ ಮಲಗಿದ್ದರೂ ಜನ ಆ ಸಿನಿಮಾ ನೋಡ್ತಾರೆ. ಅಯೋಗ್ಯ ಬ್ರಾಂಡ್ ಕ್ರಿಯೇಟ್ ಮಾಡಿದೆ. ಪ್ಯಾನ್ ಇಂಡಿಯಾ ಮಾಡೋ ಹುಚ್ಚ ಅಂತಾರೆ? ಒಂದು ಕೆಜಿಎಫ್, ಒಂದು ಕಾಂತಾರ ಮಾಡಬೇಕು ಅನ್ನೋ ಆಸೆ ನನಗಿದೆ. ಒಂದು ರೂಪಾಯಿ ನಾನು ಸೈನಿಂಗ್ ದುಡ್ಡು ತಗೊಂಡಿಲ್ಲ. ನಾಳೆ ಶೂಟಿಂಗ್ ಮಾಡಬೇಕು ಅಂತ ಹೋದ್ರೆ ನಿರ್ದೇಶಕ ಆತ್ಮಹತ್ಯೆ ಮಾಡ್ಕೊಂಡಿದ್ರು. ಅಲ್ಲಿಂದ ಜವಾಬ್ದಾರಿ ಜಾಸ್ತಿ ಆಯ್ತು. ಇಷ್ಟೆಲ್ಲ ಮಾಡಿ ಈ ಸಿನಿಮಾ ಶೂಟಿಂಗ್ ಶುರು ಆದಮೇಲೆ ನನ್ನ ಅಣ್ಣನಿಗೆ ಆಕ್ಸಿಡೆಂಟ್ ಆಗುತ್ತೆ. ಮೂರು ವರ್ಷ ಕಣ್ಣೀರು ಹಾಕಿ ಸಿನಿಮಾ ಕಂಪ್ಲೀಟ್ ಮಾಡಿದ್ದೇವೆ. ನನ್ನ ಶತ್ರುಗಳು ಈ ಸಿನಿಮಾ ನೋಡಿ ಹೆಮ್ಮೆ ಪಡ್ತಾರೆ. ಒಂದು ಸಿನಿಮಾಗೆ 50 ಲಕ್ಷ ರೂ. ತಗೊಂಡು 6 ಸಿನಿಮಾ ಮಾಡಬೋದಿತ್ತು ಮೂರು ವರ್ಷದಲ್ಲಿ, ಆದ್ರೆ ಮಾಡ್ಲಿಲ್ಲ ಸರ್ವಸ್ವವು ನಮಗೆ ರೈಸ್ ಆಫ್ ಅಶೋಕ ಆಗಿತ್ತು’ ಎಂದಿದ್ದಾರೆ.

ಬಹುಭಾಷೆಯಲ್ಲಿ ಚಿತ್ರ | ಸಿನಿಮಾ ಕನ್ನಡದ ಜೊತೆ ತೆಲುಗು ಹಾಗೂ ತಮಿಳು ಭಾಷೆಗಳಲ್ಲೂ ಬಿಡುಗಡೆಯಾಗಲಿದೆ. ವೃದ್ಧಿ ಕ್ರಿಯೇಷನ್ ಹಾಗೂ ಸತೀಶ್ ಪಿಕ್ಚರ್ಸ್ ಹೌಸ್ ಪ್ರೊಡಕ್ಷನ್ ಅಡಿ ವರ್ಧನ್ ನರಹರಿ, ಜೈಷ್ಣವಿ ಜೊತೆ ಸೇರಿ ಸತೀಶ್ ನೀನಾಸಂ ಕೂಡಾ ಸಿನಿಮಾ ನಿರ್ಮಾಣ ಮಾಡಿದ್ದಾರೆ. ‘ದಿ ರೈಸ್ ಆಫ್ ಆಫ್’ ಅಶೋಕನಿಗೆ ದಯಾನಂದ್ ಟಿ.ಕೆ ಕಥೆ ಬರೆದಿದ್ದು, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಲವಿತ್ ಕ್ಯಾಮರಾ ಹಿಡಿದಿದ್ದು, ಮನು ಶೇಡ್ಗಾರ್ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ರವಿವರ್ಮಾ ಹಾಗೂ ವಿಕ್ರಮ್ ಮೋರ್ ಅವರು ಸಾಹಸ ನಿರ್ದೇಶನ ನಿರ್ವಹಿಸಿದ್ದರೆ, ಸಂತೋಷ್ ಶೇಖರ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page