Wednesday, July 10, 2024

ಸತ್ಯ | ನ್ಯಾಯ |ಧರ್ಮ

ಬಾಬಾಗಳಿಗೆ ಸರ್ಕಾರಿ ಬೆಂಬಲ ಮುಂದುವರೆದರೆ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ: ಆಪ್‌ ನಾಯಕ ಸಂಜಯ್ ಸಿಂಗ್

ಹೊಸದಿಲ್ಲಿ: ಉತ್ತರ ಪ್ರದೇಶದ ಹತ್ರಾಸ್‌ನ ಭೋಲೆಬಾಬಾ ಸತ್ಸಂಗದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ 120 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ದುರಂತ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ಈ ದುರಂತಕ್ಕೆ ಕಾರಣನಾದ ಭೋಲೆಬಾಬಾ ತಲೆಮರೆಸಿಕೊಂಡಿದ್ದಾನೆ. ಆತನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಎಪಿ ನಾಯಕ ಸಂಜರ್ ಸಿಂಗ್ ಈ ಘಟನೆಗೆ ಪ್ರತಿಕ್ರಿಯಿಸಿದ್ದಾರೆ. ಆಡಳಿತಗಾರರು ಬಾಬಾಗಳ ಬಗ್ಗೆ ಕಾಳಜಿ ವಹಿಸಿದರೆ ಇಂತಹ ಘಟನೆಗಳು ನಡೆಯುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು.

ದೇಶದಲ್ಲಿ ಜನಜೀವನ ಮೌಲ್ಯ ಕಳೆದುಕೊಂಡಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಹರಿಯಾಣದಲ್ಲಿ ಏನಾಗುತ್ತಿದೆ ಎನ್ನುವುದನ್ನು ನಾವೆಲ್ಲರೂ ನೋಡಿದ್ದೇವೆ. ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥನಾಗಿರುವ ಬಾಬಾ ತನಗೆ ಬೇಕಾದಾಗ ಜೈಲಿನಿಂದ ಹೊರಬರುತ್ತಾನೆ. ಅದಕ್ಕೆ ಸರಕಾರಿ ಯಂತ್ರವೂ ಬೆಂಬಲ ನೀಡುತ್ತಿದೆ.

ಬಾಬಾಗಳನ್ನು ಬೆಳೆಸುತ್ತಾ ಹೋದರೆ ಇಂತಹ ಘಟನೆಗಳು ಸಂಭವಿಸುತ್ತಲೇ ಇರುತ್ತವೆ. ಇವುಗಳ ನಿಯಂತ್ರಣ ಹೇಗೆ ಮಾಡುವುದು ಎಂದು ಅವರು ಪ್ರಶ್ನಿಸಿದರು.

Related Articles

ಇತ್ತೀಚಿನ ಸುದ್ದಿಗಳು