Sunday, July 27, 2025

ಸತ್ಯ | ನ್ಯಾಯ |ಧರ್ಮ

ಲೋಕಸಭಾ ಚುನಾವಣೆ : ನಾಳೆ ವೇಳಾಪಟ್ಟಿ ಬಿಡುಗಡೆ ಸಾಧ್ಯತೆ

ನಾಳೆ ಮಧ್ಯಾಹ್ನ 3 ಗಂಟೆಗೆ ಭಾರತೀಯ ಚುನಾವಣಾ ಆಯೋಗ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಲಿದೆ ಎಂದು ತಿಳಿದು ಬಂದಿದೆ. ಎಷ್ಟು ಹಂತದಲ್ಲಿ ಚುನಾವಣೆ ನಡೆಯಲಿದೆ, ಕರ್ನಾಟಕದಲ್ಲಿ ನಡೆಯುವ ಚುನಾವಣೆ ಎಷ್ಟು ದಿನಗಳಲ್ಲಿ ಇರಲಿದೆ ಎಂಬ ಅನೇಕ ಕುತೂಹಲಗಳಿಗೆ ನಾಳೆ ತೆರೆ ಬೀಳಲಿದೆ.

ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಿದೆ. ಈ ಪ್ರಕಟಣೆಯನ್ನು ಚುನಾವಣಾ ಆಯೋಗದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

2024 ರ ಸಾರ್ವತ್ರಿಕ ಚುನಾವಣೆ ಮತ್ತು ಕೆಲವು ರಾಜ್ಯ ವಿಧಾನಸಭೆಗಳ ವೇಳಾಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗವು ಮಾರ್ಚ್ 16 ರಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದೆ. ಇದನ್ನು ಚುನಾವಣಾ ಆಯೋಗದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page