Tuesday, June 18, 2024

ಸತ್ಯ | ನ್ಯಾಯ |ಧರ್ಮ

ಹೈಕೋರ್ಟ್ ಸೂಚನೆಯಂತೆ ಎಸಿಬಿ ರದ್ದುಗೊಳಿಸಿದ ರಾಜ್ಯ ಸರ್ಕಾರ : ಲೋಕಾಯುಕ್ತಗೆ ಆನೆ ಬಲ

ಕರ್ನಾಟಕದಲ್ಲಿ ಹೈಕೋರ್ಟ್ ನೀಡಿರುವ ಆದೇಶದ ಅನ್ವಯ ACBಯನ್ನು ರದ್ದುಗೊಳಿಸುವುದಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ತಡೆ ಅಧಿನಿಯಮದಂತೆ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಸಂಪೂರ್ಣ ಅಧಿಕಾರವನ್ನು ಕೊಡಲಾಗಿದೆ. ಈ ಹಿನ್ನೆಲೆ ಲೋಕಾಯುಕ್ತಗೆ ಆನೆ ಬಲ ಬಂದಂತಾಗಿದೆ.

ಎಸಿಬಿ ರದ್ದುಗೊಳಿಸುವ ಸರ್ಕಾರದ ಆದೇಶದ ಪ್ರಕಾರ, 2022ರ ಆಗಸ್ಟ್ 8ರಂದು ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದುಗೊಳಿಸಿರುವ ಆದೇಶವನ್ನು ಅನುಷ್ಠಾನಗೊಳಿಸಿದೆ.

ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರವನ್ನು ರದ್ದುಗೊಳಿಸಿ, ಹೈಕೋರ್ಟ್ ಹೊರಡಿಸಿದ ಆದೇಶದ ತತ್ಪರಿಣಾಮವನ್ನು ಜಾರಿಗೊಳಿಸಲಾಗಿದೆ.

ಎಸಿಬಿಯಲ್ಲಿ ತನಿಖಾ ಹಂತದಲ್ಲಿರುವ ಪ್ರಕರಣಗಳು, ಬಾಕಿ ಇರುವ ವಿಚಾರಣೆಗಳು, ಶಿಸ್ತುಕ್ರಮಕ್ಕೆ ಸಂಬಂಧಿಸಿದ ಪ್ರಕರಣಗಳು ಮತ್ತು ಖಾಸಗಿ ದೂರುಗಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾಯಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಹೈಕೋರ್ಟ್ ಆದೇಶದ ಅನ್ವಯ ಸರ್ಕಾರದ ಅಧಿಸೂಚನೆ ದಿನಾಂಕ 6.2.1991 ಮತ್ತು 8.5.2022 ಹಾಗೂ 5.12.2002ರಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ತಡೆ ಅಧಿನಿಯಮ 1988ರ ಉಪಬಂಧಗಳಡಿ ನೀಡಲಾಗಿದ್ದ ತನಿಖಾಧಿಕಾರವನ್ನು ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973ರ ಉಪಬಂಧ 2(ಎಸ್)ರನ್ವಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಪೊಲೀಸ್ ಠಾಣಾಧಿಕಾರವನ್ನು ನೀಡಿ ಆದೇಶಿಸಿದ್ದ ಸರ್ಕಾರದ ಅಧಿಸೂಚನೆಗಳನ್ನು ಪುನರುಜ್ಜೀವನಗೊಳಿಸಿ ಆದೇಶಿಸಿದೆ.

ಎಸಿಬಿಯಲ್ಲಿ ತನಿಖಾ ಹಂತದಲ್ಲಿರುವ ಪ್ರಕರಣಗಳು, ಬಾಕಿ ಇರುವ ವಿಚಾರಣೆಗಳು, ಶಿಸ್ತುಕ್ರಮಕ್ಕೆ ಸಂಬಂಧಿಸಿದ ಪ್ರಕರಣಗಳು ಮತ್ತು ಖಾಸಗಿ ದೂರುಗಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾಯಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು