ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಭ್ರಷ್ಟಾಚಾರ (Corruption) ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆಯೇ ಸ್ಫೋಟಕ (Shocking) ಸತ್ಯಾಂಶವೊಂದು ಬೆಳಕಿದ್ದು, ಇಡೀ ದೇಶದಲ್ಲಿ ಅತಿ ಹೆಚ್ಚು ಭ್ರಷ್ಟಚಾರ ನಡೆಯುವ ರಾಜ್ಯಗಳ ಪೈಕಿ ಕರ್ನಾಟಕ (Karnataka) ಐದನೇ ಸ್ಥಾನದಲ್ಲಿದೆ.
ಈ ಬಗ್ಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ತಿಳಿಸಿದ್ದು, ರಾಜ್ಯದ ಪ್ರತಿಯೊಂದು ಇಲಾಖೆಯಲ್ಲಿ ಭ್ರಷ್ಟಚಾರ ತುಂಬಿ ತುಳುಕಾಡುತ್ತಿದೆ, ಕೇರಳದಲ್ಲಿ ಶೇ.10 ರಷ್ಟು ಭ್ರಷ್ಟಚಾರವಿದ್ದರೆ, ಅದೇ ಕರ್ನಾಟಕದಲ್ಲಿ ಶೇ.63 ರಷ್ಟು ಭ್ರಷ್ಟಚಾರದಿಂದ ತುಂಬಿದೆ ಎಂದು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಶೇ.63ರಷ್ಟು ಭ್ರಷ್ಟಾಚಾರ ಇದೆ. ಇದರಲ್ಲಿ ಮಹಿಳಾ ಅಧಿಕಾರಿಗಳು, ನೌಕರರು ಸಹ ಭ್ರಷ್ಟಾಚಾರದಲ್ಲಿ ಮುಳುಗಿರುವುದೆ ವಿಪರ್ಯಾಸ. ನಾನು ಉಪ ಲೋಕಾಯುಕ್ತ ಆದ ಮೇಲೆ ಇದನ್ನೆಲ್ಲಾ ನೋಡುವ ಅವಕಾಶ ಸಿಕ್ಕಿದೆ ಎಂದು ವೀರಪ್ಪ ಅವರು ಬೇಸರ ಹೊರಹಾಕಿದರು.
ಭ್ರಷ್ಟಾಚಾರವನ್ನು ಈಗಲೇ ತಡೆಯದಿದ್ದರೆ, ಮುಂದಿನ ದಿನಗಳಲ್ಲಿ ದೇಶಕ್ಕಾಗಿ ಗಂಭೀರ ಅಪಾಯ ಅನಿವಾರ್ಯ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಇದೇ ಕಾರಣಕ್ಕೆ, ತಮ್ಮ ಭೇಟಿಯಾಗುವ ಪ್ರತಿ ಸ್ಥಳದಲ್ಲೂ ಆಸ್ಪತ್ರೆಗಳಲ್ಲಿ, ಶಾಲೆಗಳಲ್ಲಿ, ಹಾಸ್ಟೆಲ್‌ಗಳಲ್ಲಿ ಭ್ರಷ್ಟಾಚಾರ ನಿರ್ಮೂಲನೆಗೆ ಶಪಥ ಮಾಡಿಸುವ ಮೂಲಕ ಸಿಬ್ಬಂದಿಯನ್ನು ಜಾಗೃತಗೊಳಿಸುತ್ತಿದ್ದೇನೆ ಎಂದು ಹೇಳಿದರು.
ಭ್ರಷ್ಟಾಚಾರ ನಿರ್ಮೂಲನೆ ಯತ್ನವು ಸಮಾಜದ ಹಿತಕ್ಕಾಗಿ ನಡೆಯುತ್ತಿರುವ ಸಾಮೂಹಿಕ ಯಜ್ಞವಾಗಿದ್ದು, ಈ ಹೋರಾಟದಲ್ಲಿ ವಕೀಲರು ಕೂಡ ಸಕ್ರಿಯವಾಗಿ ಪಾಲ್ಗೊಂಡು ಸಮಾಜ ಸುಧಾರಣೆಗೆ ಕೈಜೋಡಿಸಬೇಕು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಕರೆ ನೀಡಿದರು.
