ಹಾಸನ : ಶಾಲಾ ಬಾಲಕಿಯನ್ನು ಹಿಂಬಾಲಿಸಿ ಭಯ ಮೂಡಿಸಿದ್ದ ಆಗಂತುಕನನ್ನು ಬಂಧಿಸುವಲ್ಲಿ ಕಡೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆ ನಡೆದು ಮೂರು ದಿನಗಳ ಬಳಿಕ ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಮೂರು ದಿನಗಳ ಹಿಂದೆ ಶಾಲೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಅಂದರ್ ಎಂಬ ಆಗಂತುಕ ನಿರಂತರವಾಗಿ ಹಿಂಬಾಲಿಸಿದ್ದಾನೆ. ಈ ವೇಳೆ ಕೈ ಸನ್ನೆ ಮೂಲಕ ಅವಾಚ್ಯವಾಗಿ ವರ್ತಿಸಿ, ಬಾಲಕಿಗೆ ಆವಾಜ್ ಹಾಕಿದ್ದಾನೆ. ಆರೋಪಿಯ ವರ್ತನೆಯಿಂದ ಬಾಲಕಿ ಭಯಭೀತಳಾಗಿದ್ದು, ಅದೃಷ್ಟವಶಾತ್ ಆತನ ಕೈಗೆ ಸಿಗದೆ ಪಾರಾಗಿದ್ದಾಳೆ.
ಈ ಘಟನೆಯ ಸಂಪೂರ್ಣ ದೃಶ್ಯ ಸಮೀಪದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಹಾಸನದ ಜನತೆ ಬೆಚ್ಚಿಬಿದ್ದಿದ್ದಾರೆ. ಸಿಸಿ ಕ್ಯಾಮೆರಾ ದೃಶ್ಯಗಳಲ್ಲಿ ಆಗಂತುಕನ ಕಿರಾತಕ ವರ್ತನೆ ಸ್ಪಷ್ಟವಾಗಿ ಕಾಣಿಸಿಕೊಂಡಿದೆ.
ಘಟನೆ ಸಂಬಂಧ ಬಾಲಕಿಯ ಪೋಷಕರು ಪೆನ್ನನ್ ಮೊಹಲ್ಲಾ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ದೂರು ಮತ್ತು ಸಿಸಿ ಕ್ಯಾಮೆರಾ ದೃಶ್ಯಗಳ ಆಧಾರದಲ್ಲಿ ತನಿಖೆ ಕೈಗೊಂಡ ಪೊಲೀಸರು, ಇಂದು ಆರೋಪಿಯನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ.
