ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ ಸಚಿವ ಜನಾರ್ದನ ರೆಡ್ಡಿ ಅವರು ತಮ್ಮ ಮಗಳನ್ನು ಭೇಟಿ ಮಾಡಲು ಹಾಗೂ ನವೆಂಬರ್ 6 ರವರೆಗೆ ಬಳ್ಳಾರಿಯಲ್ಲಿ ವಾಸ್ತವ್ಯ ಹೂಡಲು ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ.

ಬಹುಕೋಟಿ ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪದಡಿ ಜನಾರ್ದನ ರೆಡ್ಡಿ ಅವರು 2015 ರಿಂದ ಜಾಮೀನಿನ ಮೇಲೆ ಹೊರಗಿದ್ದು, ಕರ್ನಾಟಕದ ಬಳ್ಳಾರಿ ಮತ್ತು ಆಂಧ್ರಪ್ರದೇಶದ ಅನಂತಪುರ ಮತ್ತು ಕಡಪಕ್ಕೆ ಭೇಟಿ ನೀಡುವುದನ್ನು ನಿಷೇಧಿಸುವುದು ಸೇರಿದಂತೆ ಹಲವು ಷರತ್ತುಗಳನ್ನು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ವಿಧಿಸಿದೆ.
ಈ ಹಿನ್ನಲೆಯಲ್ಲಿ ಜನಾರ್ದನ ರೆಡ್ಡಿ ಅವರು ಬಳ್ಳಾರಿಗೆ ಭೇಟಿ ನೀಡುವುದನ್ನು ಮತ್ತು ವಾಸ್ತವ್ಯ ಹೂಡುವುದನ್ನು ನಿಷೇದಿಸುವುದಾಗಿ ಸುಪ್ರೀಂ ಕೊರ್ಟ್ ಆದೇಶಿಸಿತ್ತು.
ಆದರೆ ಜನಾರ್ದನ ರೆಡ್ಡಿ ಅವರ ಮಗಳು ಇತ್ತೀಚಿಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಮೊಮ್ಮಗಳನ್ನು ಮತ್ತು ಮಗಳನ್ನು ನೋಡುವ ನಿಟ್ಟಿನಲ್ಲಿ, ಬಳ್ಳಾರಿಗೆ ಭೇಟಿ ನೀಡಲು ರೆಡ್ಡಿ ಅವರು ಸುಪ್ರೀಂ ಕೋರ್ಟ್‌ಗೆ ಅನುಮತಿ ಕೋರಿದ್ದರು. ಹೀಗಾಗಿ ಅನುಮತಿಯನ್ನು ಸ್ವೀಕರಿಸಿದ ಸುಪ್ರೀಂ ನ್ಯಾಯಾಲಯ, ರೆಡ್ಡಿ ಅವರಿಗೆ ಬಳ್ಳಾರಿಗೆ ಭೇಟಿ ನೀಡಲು ಮತ್ತು ಕೆಲವು ದಿನ ವಾಸ್ತವ್ಯ ಹೂಡಲು ಅನುಮತಿ ನೀಡಿದೆ.