Monday, November 25, 2024

ಸತ್ಯ | ನ್ಯಾಯ |ಧರ್ಮ

ನಿಮಗೆ ದೇಶದ ಜನತೆ ತಕ್ಕ ಶಿಕ್ಷೆ ನೀಡಲಿದ್ದಾರೆ: ವಿಪಕ್ಷಗಳಿಗೆ ಪ್ರಧಾನಿ ಮೋದಿ ಎಚ್ಚರಿಕೆ

ಸಂವಿಧಾನ ಜಾರಿಗೆ ಬಂದು 75 ವರ್ಷಗಳಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ನೆನಪಿಸಿದರು. ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಸಂಸತ್ತಿನ ಹೊರಗಿನ ಮೀಡಿಯಾ ಪಾಯಿಂಟ್‌ ಬಳಿ ಪ್ರಧಾನಿ ಮಾತನಾಡಿದರು.

ಈ ಸಂದರ್ಭದಲ್ಲಿ ಪ್ರತಿಪಕ್ಷ ಈಂಡಿಯಾ ಮೈತ್ರಿ ಕೂಟವನ್ನು ತೀವ್ರವಾಗಿ ಟೀಕಿಸಲಾಯಿತು. ಜನರಿಂದ ತಿರಸ್ಕೃತಗೊಂಡಿರುವ ಕೆಲವರು ಗೂಂಡಾಗಿರಿ ಮೂಲಕ ಸಂಸತ್ತಿನ ಮೇಲೆ ಹಿಡಿತ ಸಾಧಿಸಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ ಎಂದು ತೀವ್ರ ಆರೋಪ ಮಾಡಿದರು. ಅವರ ಎಲ್ಲಾ ಕೆಲಸಗಳನ್ನು ದೇಶದ ಜನರು ಲೆಕ್ಕ ಹಾಕಿ ಸರಿಯಾದ ಸಮಯದಲ್ಲಿ ಶಿಕ್ಷೆ ನೀಡುತ್ತಾರೆ ಎಂದು ಅವರು ಹೇಳಿದರು.

”ಕೆಲವರು ಸ್ವಾರ್ಥ ರಾಜಕೀಯ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದ್ದಾರೆ. ಜನರಿಂದ ತಿರಸ್ಕೃತಗೊಂಡ ಕೆಲವರು ಗೂಂಡಾಗಿರಿ ಮೂಲಕ ಸಂಸತ್ತನ್ನು ನಿಯಂತ್ರಿಸಲು ಯತ್ನಿಸುತ್ತಿದ್ದಾರೆ. ತಮ್ಮ ಲಾಭಕ್ಕಾಗಿ ಸಂಸತ್ತಿನ ಸಭೆಗೆ ಅಡ್ಡಿಪಡಿಸಲು ಯತ್ನಿಸುತ್ತಿದ್ದಾರೆ. ದೇಶದ ಜನರು ತಮ್ಮ ಎಲ್ಲಾ ಕಾರ್ಯಗಳನ್ನು ನೋಡುತ್ತಿದ್ದಾರೆ. ಅವರು ಸರಿಯಾದ ಸಮಯದಲ್ಲಿ ಶಿಕ್ಷಿಸುತ್ತಾರೆ. ಸಂಸತ್ತಿನಲ್ಲಿ ಸಕಾರಾತ್ಮಕ ಚರ್ಚೆಗಳು ನಡೆಯಬೇಕೆಂದು ನಾನು ಬಯಸುತ್ತೇನೆ” ಎಂದು ಮೋದಿ ಹೇಳಿದರು.

ಈ ಸಂಸತ್ತಿನ ಸಭೆಗಳು ಹಲವು ಅಂಶಗಳಲ್ಲಿ ಪ್ರಮುಖವಾಗಿವೆ ಎಂದು ಪ್ರಧಾನಿ ಹೇಳಿದರು. ನವೆಂಬರ್ 26ಕ್ಕೆ ಭಾರತ ಸಂವಿಧಾನದ 75ನೇ ವರ್ಷಕ್ಕೆ ಕಾಲಿಡುತ್ತಿದ್ದೇವೆ ಎಂದು ಹೇಳಿದ್ದಾರೆ. ಇದರ ನಿಮಿತ್ತ ಸಂವಿದಾನ ಸದನದಲ್ಲಿ ನಾಳೆ ಸಂವಿಧಾನ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದರು. ಎಲ್ಲರೂ ಒಗ್ಗಟ್ಟಿನಿಂದ ಸಂವಿಧಾನ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page