Sunday, January 11, 2026

ಸತ್ಯ | ನ್ಯಾಯ |ಧರ್ಮ

ನಮ್ಮ ಮೆಟ್ರೋಗೆ ಹಾರಿ ಯುವಕ ಆತ್ಮ*ತ್ಯೆ; ಸೂಸೈಡ್ ಸ್ಪಾಟಿನಂತಾಗುತ್ತಿರುವ ಮೆಟ್ರೋ ನಿಲ್ದಾಣಗಳು!

ಬೆಂಗಳೂರು: ನಗರದ ನಮ್ಮ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದ ಯುವಕನೊಬ್ಬ ಹಳಿಗಳ ಮೇಲೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದೊಡ್ಡಕಲ್ಲಸಂದ್ರದಲ್ಲಿ ಘಟನೆ ನಡೆದಿದೆ. ಹೀಗಾಗಿ ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಕೂಡ ಉಂಟಾಗಿದೆ.

ಬೆಂಗಳೂರಿನ ದೊಡ್ಡಕಲ್ಲಸಂದ್ರದ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಹಳಿಗಳ ಮೇಲೆ ಹಾರಿದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ತಿಳಿದು ಬಂದಿದೆ. ಯುವಕನ ಪೂರ್ವಾಪರದ ಬಗ್ಗೆ ಇನ್ನೂ ಮಾಹಿತಿ ತಿಳಿಯಬೇಕಿದೆ.

ವಿಷಯ ತಿಳಿದು ಸ್ಥಳಕ್ಕೆ ಕೋಣನಕುಂಟೆ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಘಟನೆಯಿಂದ ನಮ್ಮ ಮೆಟ್ರೋ ನಿಲ್ದಾಣದ ಹಸಿರು ಮಾರ್ಗದಲ್ಲಿ ವ್ಯತ್ಯಯ ಉಂಟಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಮೆಟ್ರೋ ನಿಲ್ದಾಣ ಸೂಸೈಡ್ ಸ್ಪಾಟ್ ನಂತಾಗಿದ್ದು ಆತ್ಮಹತ್ಯೆ ಮಾಡಿಕೊಳ್ಳುವವರ ಫೇವರಿಟ್ ತಾಣವಾಗಿ ಮಾರ್ಪಟ್ಟಿದೆ. ಇಂತಹ ಘಟನೆಯ ಬಗ್ಗೆ ನಮ್ಮ ಮೆಟ್ರೋ ಮುಂದಿನ ದಿನಗಳಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳುವರೋ ಎಂಬುದು ಮಾತ್ರ ಯಕ್ಷಪ್ರಶ್ನೆಯಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page