Home ನಿಧನ ಸುದ್ದಿ ಖ್ಯಾತ ಚಿತ್ರನಟ, ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ

ಖ್ಯಾತ ಚಿತ್ರನಟ, ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ

0

ಹಾಸ್ಯನಟ, ನಿರ್ದೇಶಕ, ನಾಟಕಕಾರ, ರಚನೆಕಾರ, ಸಂಭಾಷಣಾಕಾರರಾಗಿ ತಮ್ಮ ಕಲೆಯ ಮೂಲಕ ಲಕ್ಷಾಂತರ ಜನರ ಮನ ಗೆದ್ದಿದ್ದ ಯಶವಂತ ಸರದೇಶಪಾಂಡೆ (60) ಇಂದು ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹೃದಯಾಘಾತ ಉಂಟಾದ ಕೂಡಲೇ ಅವರನ್ನು ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇವರು ನಟಿಸಿ-ನಿರ್ದೇಶಿಸಿರುವ ಆಲ್ ದಿ ಬೆಸ್ಟ್ ನಾಟಕ ಅಭೂತಪೂರ್ವ ಯಶಸ್ಸು ಕಂಡಿತು. ಕಿರುತೆರೆ ಮತ್ತು ಚಲನಚಿತ್ರಗಳಲ್ಲಿ ಪಾತ್ರವಹಿಸಿದ್ದರು. ಇವರ ಪತ್ನಿ ಮಾಲತಿ ಸಹ ರಂಗಭೂಮಿ ಮತ್ತು ಕಿರುತೆರೆಯಲ್ಲಿ ಜನಪ್ರಿಯ ಕಲಾವಿದೆಯಾಗಿದ್ದರು.

ಯಶವಂತ ಸರದೇಶಪಾಂಡೆಯವರು ಹುಟ್ಟಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಎಂಬ ಹಳ್ಳಿಯಲ್ಲಿ. ಈಗಾಗಲೇ ಹಲವು ಸಿನಿಮಾಗಳು ಮತ್ತು ಕಿರುತೆರೆಯಲ್ಲೂ ನಟಿಸಿದ ಖ್ಯಾತಿ ಯಶವಂತ ಸರದೇಶಪಾಂಡೆ ಅವರಿಗಿದೆ.

You cannot copy content of this page

Exit mobile version