Wednesday, August 20, 2025

ಸತ್ಯ | ನ್ಯಾಯ |ಧರ್ಮ

ಪೊಲೀಸ್ ಠಾಣೆಯಲ್ಲೇ ಕಳ್ಳತನದ ಆರೋಪಿ ಆತ್ಮಹತ್ಯೆ; ಲಾಕಪ್ ಡೆತ್ ಎಂದು ಆರೋಪಿಸಿದ ಸಂಬಂಧಿಕರು

ಬೆಂಗಳೂರಿನ ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕೆಎಂ ದೊಡ್ಡಿಯಲ್ಲಿ ಕಳ್ಳತನದ ಆರೋಪಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದುಂಡನಹಳ್ಳಿ ನಿವಾಸಿ ರಮೇಶ್ ಮೃತರು ಎಂದು ತಿಳಿದು ಬಂದಿದೆ.

ದೇವಸ್ಥಾನದ ಕಳ್ಳತನ ಕೇಸ್ ನಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬೊಮ್ಮನಾಯಕನಹಳ್ಳಿ ಗ್ರಾಮದ ದೇವಸ್ಥಾನದಲ್ಲಿ ಕಳ್ಳತನ ಆಗಿತ್ತು. ಈ ಪ್ರಕರಣದಲ್ಲಿ ರಮೇಶ್, ಮಂಜು, ಕೋಲಾರ ಮೂಲದ ಅನಿಲ್ ರನ್ನು ಪೊಲೀಸರು ಬಂಧಿಸಿದ್ದರು. ಕೋರ್ಟ್ ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದರು.

ಬೆಳಗ್ಗೆ ಪೊಲೀಸ್ ಠಾಣೆಯ ಶೌಚಾಲಯಕ್ಕೆ ಹೋಗಿ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಮೇಶ್ ಸಂಬಂಧಿಕರು ಲಾಕಪ್ ಡೆತ್ ಆರೋಪ ಮಾಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page